/newsfirstlive-kannada/media/post_attachments/wp-content/uploads/2024/12/LAKSHIMI_HEBBALKAR.jpg)
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೀಡಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿಸಿ ಬರುವಾಗ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ.
ಅಪಘಾತ ಆಗಿದ್ದು ಹೇಗೆ?
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಹಾಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮತ್ತು ಮುಖಕ್ಕೆ ಸಣ್ಣಪುಟ್ಟ ಗಾಯಗಳು ಆಗಿವೆ. ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಅವರಿಗೂ ತಲೆಗೆ ಗಾಯ ಆಗಿದೆ.
ಸದ್ಯ ಇಬ್ಬರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಆಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಕಾರಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಕೊಪ್ಪಳ ಗವಿಮಠ ಜಾತ್ರೆ; ನಾಳೆ ಮಹಾರಥೋತ್ಸವ; ಈ ಬಾರಿಯ ವಿಶೇಷತೆಗಳು ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ