newsfirstkannada.com

ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share :

27-07-2023

    ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು

    7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳು

    ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ಪಕ್ಕಾ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯಾದ್ಯಂತ ಸಾಕಷ್ಟು ಸವಾಲು ಎದುರಾಗ್ತಿದೆ. ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್​ ಮಾಡುವ ಮೂಲಕ ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭವೆಂದು ಹೇಳಿದ್ದಾರೆ.

ಟ್ವಿಟ್ಟರ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ಅಗತ್ಯವಿರುವ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.

ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್‌ಎಂಎಸ್ ಅವಲಂಭಿಸದೇ ದಾಖಲಾತಿಗಳೊಂದಿಗೆ ನೇರವಾಗಿ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಯೋಜನೆಗೆ ಚಾಲನೆ ಸಿಕ್ಕ  7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿರುವುದು ಖುಷಿ ತಂದಿದೆ, ಇದಲ್ಲದೇ ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್​ ಮಾಡಿದ್ದಾರೆ.

62,01,530 ಮಹಿಳೆಯರಿಂದ ಅರ್ಜಿ

ಈಗಾಗಲೇ ಅನೇಕರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬುಧವಾರದಂದು 11,39,716 ಮಹಿಳೆಯರಿಂದ ನೊಂದಣಿ ಮಾಡಿಕೊಂಡಿದ್ದಾರೆ. ಒಟ್ಟಾರೆ ಇದುವರೆಗೆ 62,01,530 ಮಹಿಳೆಯರಿಂದ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಗೆ ನೊಂದಣಿ ಸಮಯದಲ್ಲಿ ಹಣ ಪಡೆದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

https://newsfirstlive.com/wp-content/uploads/2023/07/LAXMI_HEBLKAR.jpg

Load More