newsfirstkannada.com

KSRTC ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಕೇಸ್​ -ತಮ್ಮ ಮೇಲಿನ ಆರೋಪಕ್ಕೆ ಮೌನ ಮುರಿದ ಸಚಿವ ಚಲುವರಾಯಸ್ವಾಮಿ

Share :

06-07-2023

    ‘ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ದರು, ಆದರೆ’ -ಚಲುವರಾಯಸ್ವಾಮಿ

    ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕ

    ಆಸ್ಪತ್ರೆಗೆ ಕುಮಾರಸ್ವಾಮಿ ಭೇಟಿ ಬೆನ್ನಲ್ಲೇ ಸಚಿವರಿಂದ ಪ್ರತಿಕ್ರಿಯೆ

ಮಂಡ್ಯ: ನೆಲಮಂಗಲ ಡಿಪೋ KSRTC ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಚಿವರ ಶಿಫಾರಸ್ಸಿನ ಮೇರೆಗೆ ನನ್ನನ್ನು ವರ್ಗಾವಣೆ ಮಾಡಿದ್ದಾರೆ. ನನಗೆ ಹಿರಿಯ ಅಧಿಕಾರಿಗಳು ಕೊಟ್ಟಿರುವ ಟಾರ್ಚರ್​​​ನಲ್ಲಿ ಸಚಿವರ ಕೈವಾಡ ಇದೆ ಎಂದು ಆತ್ಮಹತ್ಯೆಗೆ ಯತ್ನಿಸಿರುವ ಜಗದೀಶ್ ಆರೋಪ ಮಾಡಿದ್ದಾರೆ. ಇದೇ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪ್ರಶ್ನೆ ಮಾಡಿದ್ದಾರೆ.

ತಮ್ಮ ಮೇಲೆ ಗಂಭೀರವಾದ ಆರೋಪ ಕೇಳಿಬಂದ ಬೆನ್ನಲ್ಲೇ ಚಲುವರಾಯಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಅನಾವಶ್ಯಕ ರೀತಿಯಲ್ಲಿ ರಾಜಕೀಯ ಮಾಡ್ತಿದ್ದಾರೆ. ಇದೇ ಅವರ ಕಾಯಕ. ವರ್ಗಾವಣೆ ಪ್ರಕ್ರಿಯೆ ಸಹಜ. ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತದೆ. ನಾನು ಆ ಚಾಲಕನ ವರ್ಗಾವಣೆಗೆ ಲೆಟರ್ ಕೊಟ್ಟಿಲ್ಲ, ವರ್ಗಾವಣೆ ಮಾಡಿ ಎಂದು ನಾನು ಹೇಳಿಲ್ಲ. ಆದರೆ ವರ್ಗಾವಣೆ ಆಗಿದೆ ಎಂದಿದ್ದಾರೆ.

ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ದರು. ಹಾಗಾಗಿ ಅದನ್ನು ನಾನೇ ಹೋಲ್ಡ್ ಮಾಡುವಂತೆ ಹೇಳಿದ್ದೇನೆ. ಏನಾದರೂ ತಪ್ಪಿದ್ದರೆ ತನಿಖೆ ಮಾಡಿ ಆಮೇಲೆ ವರ್ಗಾವಣೆ ಮಾಡಿ ಎಂದು ಹೇಳಿದ್ದೆ. ಅದನ್ನು ಕ್ಯಾನ್ಸಲ್ ಮಾಡಿ ಎಂದು ಒತ್ತಾಯಿಸಿ ನಿನ್ನೆ ಈ ರೀತಿ ಮಾಡಿಕೊಂಡಿದ್ದಾರೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಕೇಸ್​ -ತಮ್ಮ ಮೇಲಿನ ಆರೋಪಕ್ಕೆ ಮೌನ ಮುರಿದ ಸಚಿವ ಚಲುವರಾಯಸ್ವಾಮಿ

https://newsfirstlive.com/wp-content/uploads/2023/07/MND_CHALUVARAYA.jpg

Load More