ದಂಡ ಪಾವತಿಸಲು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ
ಯಾರೋ ಮಾಡಿದ ತಪ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆಗೆ ದಂಡ
ಗೃಹಲಕ್ಷ್ಮೀ ಯೋಜನೆ ಜಾರಿ ವೇಳೆ ಯಡವಟ್ಟು ಮಾಡಿದ ಬೆಂಬಲಿಗರು
ಕಲಬುರಗಿ: ಪಾಲಿಕೆಯ ರಸ್ತೆಗಳಲ್ಲಿ ಅನುಮತಿ ಪಡೆಯದೇ ಬ್ಯಾನರ್ಗಳನ್ನು ಅಳವಡಿಸಿದ್ದಕ್ಕೆ ಕಲಬುರಗಿ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದಂಡ ವಿಧಿಸಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರ ಭಾವಚಿತ್ರವಿರುವ ಬ್ಯಾನರ್ಗಳನ್ನು ನಗರದ ರಸ್ತೆಗಳಲ್ಲಿ ಅಳವಡಿಸಲಾಗಿತ್ತು. ಇದಕ್ಕೆ ಮಹಾನಗರ ಪಾಲಿಕೆಯ ಅನುಮತಿಯನ್ನು ಅವರ ಬೆಂಬಲಿಗರು ಪಡೆದಿರಲಿಲ್ಲ. ಹೀಗಾಗಿ ಕಲಬುರಗಿ ಮಹಾನಗರ ಪಾಲಿಕೆಯು ಪ್ರಿಯಾಂಕ್ ಖರ್ಗೆಯವರಿಗೆ 5,000 ರೂಪಾಯಿ ದಂಡವನ್ನು ವಿಧಿಸಿದೆ.
ನಿನ್ನೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರಿಯಾಂಕ್ ಖರ್ಗೆ ಅವರ ಭಾವಚಿತ್ರವಿರುವ ಬ್ಯಾನರ್ಗಳನ್ನು ಹಾಕಲಾಗಿತ್ತು. ಇದಕ್ಕೆ ಅನುಮತಿ ಪಡೆಯದೇ ಇರುವುದಕ್ಕೆ ಪಾಲಿಕೆ ಅಧಿಕಾರಿಗಳು ಸಚಿವರಿಗೆ ದಂಡ ಹಾಕಿದ್ದಾರೆ. ಪಾಲಿಕೆ ಕ್ರಮವನ್ನು ಬೆಂಬಲಿಸಿರುವ ಸಚಿವರು ದಂಡದ ಮೊತ್ತವನ್ನು ಪಾವತಿಸಲು ಒಪ್ಪಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ