newsfirstkannada.com

ಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?

Share :

04-09-2023

  ಸನಾತನ ಧರ್ಮ ನಿರ್ಮೂಲನೆ ಮಾಡಬೇಕೆಂದು ಹೇಳುವುದು ಸರಿಯಲ್ಲ

  ಯಾವುದೇ ಕೇಸ್​ಗಳನ್ನು ಎದುರಿಸಲು ನಾನು ಸಿದ್ಧವಾಗಿದ್ದೇನೆ; ಉದಯನಿಧಿ

  ಸನಾತನ ಎಂದರೆ ಸದಾ ಕಾಲವೂ ಇರುವಂತಹದ್ದು-ಪೇಜಾವರ ಶ್ರೀ

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ಖಂಡನೆ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮಾತನಾಡಿ, ಉದಯನಿಧಿ ಸ್ಟಾಲಿನ್ ಸಮಾಜದಲ್ಲಿ ವಿಷ ಬೀಜ ಬಿತ್ತಿದ್ದಾರೆ. ಸಮಾಜದಲ್ಲಿ ಇಂತಹ ವಿಷ ಬೀಜ ಬಿತ್ತುವುದು ಸರಿಯಲ್ಲ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸನಾತನ ಎಂದರೆ ಸದಾ ಕಾಲವೂ ಇರುವಂತಹದ್ದು ಎಂದು ಅರ್ಥ ಬರುತ್ತದೆ. ಅಂತಹ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಸ್ಟಾಲಿನ್ ಹೇಳಿರುವುದು ಸರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ಸಮರಕ್ಕೆ ನಟ ಪ್ರಕಾಶ್ ರಾಜ್ ಬೆಂಬಲ; ‘ಸನಾತನ’ದ ಬಗ್ಗೆ ವ್ಯಂಗ್ಯವಾಗಿ ಹೇಳಿದ್ದೇನು?

ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದೇಶದ್ಯಾಂತ ಈಗಾಗಲೇ ಹಿಂದೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು ದೆಹಲಿಯಲ್ಲಿ ಪ್ರಕರಣ ಕೂಡ ದಾಖಲು ಮಾಡಲಾಗಿದೆ. ಹಿಂದೂ ಪರ ಸಂಘಟನೆಗಳಿಂದ ಆಂದೋಲನಕ್ಕೆ ನಿರ್ಧರಿಸಲಾಗಿದೆ. ಅಲ್ಲದೇ ಹೇಟ್ ಸ್ಪೀಚ್ ಮಾಡಿದ್ರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ಹೀಗಾಗಿ ಸ್ಟಾಲಿನ್ ವಿರುದ್ಧ ರಾಷ್ಟ್ರವ್ಯಾಪಿ ದೂರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲೂ ಕೇಸ್ ದಾಖಲಿಸಲಾಗುತ್ತದೆ ಎನ್ನಲಾಗಿದೆ. ಈ ಕೂಡಲೇ ಉದಯನಿಧಿ ಸ್ಟಾಲಿನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಲಾಗಿದೆ.

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಕಿಡಿಕಾರಿದ್ದಾರೆ. ಉದ್ದವ್ ಠಾಕ್ರೆ ಬಣದ ಪ್ರಿಯಾಂಕಾ ಚತುರ್ವೇದಿ ಕೂಡ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೇ, ದೇಶವ್ಯಾಪಿ ಈ ಹೇಳಿಕೆಯ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಇನ್ನು ಸಚಿವ ಉದಯನಿಧಿ ಸ್ಟಾಲಿನ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ನಾನು ಯಾವುದೇ ಕೇಸ್​ಗಳನ್ನು ಬೇಕಾದರೂ ಎದುರಿಸಲು ಸಿದ್ಧನಿದ್ದೇನೆ. ಇಂಡಿಯಾ ಮೈತ್ರಿಕೂಟದಿಂದ ಬಿಜೆಪಿಗೆ ಭಯ ಶುರುವಾಗಿದೆ. ಹೀಗಾಗಿ ಗಮನ ಬೇರೆಡೆ ಸೆಳೆಯಲು ಹೀಗೆಲ್ಲ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?

https://newsfirstlive.com/wp-content/uploads/2023/09/UDAYANIDHI_STALIN.jpg

Load More