newsfirstkannada.com

‘ಮುಸ್ಲಿಂ ಸ್ಪೀಕರ್ ಎದುರು ಬಿಜೆಪಿಗರು ನಮಸ್ಕಾರ್ ಸಾಬ್ ಅಂತ ನಿಲ್ಬೇಕು’- ವಿವಾದಾತ್ಮಕ ಹೇಳಿಕೆಗೆ ಸಚಿವ ಜಮೀರ್ ಸ್ಪಷ್ಟನೆ

Share :

Published November 17, 2023 at 5:16pm

Update November 17, 2023 at 5:17pm

  ಸ್ಪೀಕರ್ ಎದುರು ಬಿಜೆಪಿಗರು ನಮಸ್ಕಾರ್ ಸಾಬ್ ಅಂತ ನಿಲ್ಲಬೇಕು

  ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ?

  ಬಿ.ವೈ ವಿಜಯೇಂದ್ರ, ಬಿಜೆಪಿಗರು ನನ್ನ ಮಾತು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ

ಬೆಂಗಳೂರು: ಮುಸ್ಲಿಂ ಸ್ಪೀಕರ್ ಎದುರು ಬಿಜೆಪಿಗರು ನಮಸ್ಕಾರ್ ಸಾಬ್ ಅಂತ ನಿಲ್ಲಬೇಕು. ತೆಲಂಗಾಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ ಎನ್ನಲಾದ ಈ ವಿವಾದಾತ್ಮಕ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮಾತಾಡಿದ ಜಮೀರ್, ರಾಜ್ಯದ ಇತಿಹಾಸದಲ್ಲಿ ಎಂದೂ ಮುಸ್ಲಿಂರು ಸ್ಪೀಕರ್ ಆಗಿರಲಿಲ್ಲ. ಕಾಂಗ್ರೆಸ್ ಪಕ್ಷ ಯು.ಟಿ ಖಾದರ್ ಅವರನ್ನು ಸ್ಪೀಕರ್ ಮಾಡಲಾಗಿದೆ. ಒಳ್ಳೊಳ್ಳೆಯ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಅಂತ ಕೈ ಮುಗಿದು ನಿಂತ್ಕೊಬೇಕು. ಕಾಂಗ್ರೆಸ್ ಪಕ್ಷ ಹೀಗೆ ಮಾಡಿದೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ ಎನ್ನಲಾಗಿತ್ತು. ಸಚಿವ ಜಮೀರ್ ಅವರ ನಮಸ್ಕಾರ್ ಸಾಬ್ ಅನ್ನೋ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸ್ಪೀಕರ್ ಸ್ಥಾನ ಯಾವುದೇ ಧರ್ಮಕ್ಕೆ ಸೀಮಿತವಲ್ಲ. ಅವರು ಪ್ರತಿಯೊಬ್ಬ ಶಾಸಕರಿಗೂ ಸ್ಪೀಕರ್ ಎಂದಿದ್ದರು.

ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ

ತೆಲಂಗಾಣ ಚುನಾವಣೆಯ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್‌ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿಗರು ನನ್ನ ಮಾತು ತಪ್ಪಾಗಿ ಅರ್ಥೈಸಿಕೊಂಡು ವಿವಾದದ ಸ್ವರೂಪ ನೀಡುತ್ತಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್‌ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮುಸ್ಲಿಂ ಸ್ಪೀಕರ್ ಎದುರು ಬಿಜೆಪಿಗರು ನಮಸ್ಕಾರ್ ಸಾಬ್ ಅಂತ ನಿಲ್ಬೇಕು’- ವಿವಾದಾತ್ಮಕ ಹೇಳಿಕೆಗೆ ಸಚಿವ ಜಮೀರ್ ಸ್ಪಷ್ಟನೆ

https://newsfirstlive.com/wp-content/uploads/2023/11/zamer.jpg

Load More