Advertisment

ಸಚಿವ ಜಮೀರ್​​ಗೆ ಸಂಕಷ್ಟ.. ರಾಜ್ಯಪಾಲರ ನಿರ್ಧಾರದ ಮೇಲೆ ಭಾರೀ ಕುತೂಹಲ

author-image
Veena Gangani
Updated On
VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್‌ U ಟರ್ನ್‌ ಯಾಕೆ?
Advertisment
  • ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಜೆಡಿಎಸ್ ದೂರು
  • ಜೆಡಿಎಸ್​ ದೂರಿಗೆ ಸ್ಪಷ್ಟನೆ ಕೇಳಿದ ಗವರ್ನರ್ ಗೆಹ್ಲೋಟ್
  • ಗವರ್ನರ್​ ಪ್ರಾಸಿಕ್ಯೂಷನ್​ಗೆ ಅನುಮತಿಸಿದ್ರೆ ಸಂಕಷ್ಟ

ಸಚಿವ ಜಮೀರ್ ಅಹ್ಮದ್ ಅಲ್ಪಸಂಖ್ಯಾತ ಇಲಾಖೆಯಲ್ಲಿ ಅನುದಾನ ದುರ್ಬಳಕೆ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿತ್ತು. ಸದ್ಯ ದೂರಿನ ಬಗ್ಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು ಕೆಲ ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ರೆ ಸಚಿವ ಜಮೀರ್​​ಗೆ ಸಂಕಷ್ಟ ಎದುರಾಗಲಿದೆ.

Advertisment

publive-image

ಸಚಿವ ಜಮೀರ್ ಅಹ್ಮದ್ ಖಾನ್ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೇ ಅಸ್ತ್ರ ಹಿಡಿದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದವು. ಬಳಿಕ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಜೆಡಿಎಸ್​ ದೂರು ನೀಡಿದ್ದು ಇದು ಸಚಿವ ಜಮೀರ್​ಗೆ ಸಂಕಷ್ಟ ತಂದೊಡ್ಡಿದೆ.

ಇದನ್ನೂ ಓದಿ:  ಹೈಕೋರ್ಟ್ ಸೂಕ್ತ ವಿವೇಚನೆ ಬಳಸಿ ದರ್ಶನ್​​ಗೆ ಜಾಮೀನು ನೀಡಿಲ್ಲ -ಸುಪ್ರೀಂ ಕೋರ್ಟ್​ ಅತೃಪ್ತಿ

ಮೂಡಾ, ವಾಲ್ಮೀಕಿ ನಿಗಮ, ವಸತಿ ಇಲಾಖೆ ಬಳಿಕ ಅಲ್ಪಸಂಖ್ಯಾತ ಇಲಾಖೆಯಲ್ಲೂ ಅಕ್ರಮದ ಹೊಗೆಯಾಡ್ತಿದ್ದು ಸಚಿವ ಜಮೀರ್ ಅಹ್ಮದ್ ಸುತ್ತ ಹಗರಣ ಸುತ್ತಿಕೊಂಡಿದೆ. ಬರೋಬ್ಬರಿ 625 ಕೋಟಿ ಅನುದಾನ ದುರ್ಬಳಕೆ ಆರೋಪ ಕೇಳಿಬಂದಿದೆ. ಸಿಎಂ ಅನುಮೋದನೆಯನ್ನೇ ಪಡೆಯದೇ ಹಾಗೂ ಆರ್ಥಿಕ ಇಲಾಖೆಯ ಸಹಮತಿ ಇಲ್ಲದೇ ಗುತ್ತಿಗೆದಾರರ ಜೊತೆ ಶಾಮೀಲಾಗಿ ಸಚಿವ ಜಮೀರ್ ಅಹ್ಮದ್ ಖಾನ್ 625 ಕೋಟಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ಜೆಡಿಎಸ್​​​, ಸಚಿವ ಜಮೀರ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು..

Advertisment

publive-image

ಸಚಿವ ಜಮೀರ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ JDS ವಕ್ತಾರ ಪ್ರದೀಪ್ ಕುಮಾರ್ ದೂರು ನೀಡಿದ್ದರು. ಸದ್ಯ ಪ್ರದೀಪ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಲಾವ್ ನೀಡಿದ್ದಾರೆ. ಕೆಲ ದಾಖಲೆಗಳ ಬಗ್ಗೆ ಮಾಹಿತಿ ನೀಡುವಂತೆ ಗವರ್ನರ್ ಸೂಚನೆ ನೀಡಿದ್ದಾರೆ. ಪ್ರದೀಪ್ ಕುಮಾರ್ ದೂರಿನ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಇನ್ನು ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ರೆ ಸಚಿವ ಜಮೀರ್​ಗೆ ಸಂಕಷ್ಟ ಎದುರಾಗಲಿದೆ. ಅನುಮತಿ ನೀಡಿದ್ರೆ ಜನಪ್ರತಿನಿಧಿಗಳ ಕೋರ್ಟ್​ಗೆ ದೂರು ನೀಡಲು JDS ವಕ್ತಾರ ಪ್ರದೀಪ್ ನಿರ್ಧಾರ ಮಾಡಿದ್ದಾರೆನ್ನಲಾಗಿದೆ.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಜಮೀರ್ ನಾನಂಥವನಲ್ಲ ಅಂತ ಅಬ್ಬರಿಸಿದ್ದರು. ಆದ್ರೆ ಅಲ್ಪಸಂಖ್ಯಾತ ಇಲಾಖೆಯ ಅನುದಾನ ದುರ್ಬಳಕೆ ಬಗ್ಗೆ ಇದುವರೆಗೂ ಖಾನ್ ಸಾಹೇಬ್ರು ತುಟಿಬಿಚ್ಚಿಲ್ಲ. ಇತ್ತ, ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಮೌನಕ್ಕೆ ಜಾರಿದ್ದಾರೆ. ಸದ್ಯ ಈ ಕುರಿತ ದೂರು ರಾಜ್ಯಪಾಲರ ಅಂಗಳದಲ್ಲಿದೆ. ಒಂದು ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ್ರೆ ಜೆಡಿಎಸ್​​ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಿದೆ. ಬಳಿಕ ಸಚಿವ ಜಮೀರ್ ಕೋರ್ಟ್ ವಿಚಾರಣೆಯನ್ನು ಎದುರಿಸಬೇಕಾಗಿ ಬರುವ ಸಂಕಷ್ಟ ಎದುರಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment