newsfirstkannada.com

ಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; ಶಾಲೆಗೆ ಹೋಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳ ಶವ ಪತ್ತೆ

Share :

Published February 28, 2024 at 7:25am

Update February 28, 2024 at 8:05am

    10ನೇ ತರಗತಿ ಓದುತ್ತಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ

    ಸುರತ್ಕಲ್​ನ ವಿದ್ಯಾದಾಯಿನಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು

    ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಂಗಳೂರು: ನಿನ್ನೆ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ (15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್( 15) ಸಾವನ್ನಪ್ಪಿದ್ದಾರೆ. ಮಂಗಳೂರಿನ ಸುರತ್ಕಲ್​ನ ವಿದ್ಯಾದಾಯಿನಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದರು.

ನಿನ್ನೆ ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ತೆರಳದೇ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಮಕ್ಕಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಮತ್ತು ಪೊಲೀಸರು ಹುಡುಕಾಟ ನಡೆಸಿದ್ದರು. ಶಾಲೆಯಿಂದ ಹಳೆಯಂಗಡಿ ನದಿ ಬಳಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್, ಸಮವಸ್ತ್ರ ಪತ್ತೆಯಾಗಿತ್ತು. ಅಲ್ಲಿ ತೀವ್ರ ಹುಡುಕಾಟ ನಡೆಸಿದಾಗ ನಾಲ್ವರು ಮಕ್ಕಳ ಶವ ಪತ್ತೆಯಾಗಿವೆ. ನದಿಯಲ್ಲಿ ಈಜಾಡಲು ಹೋಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; ಶಾಲೆಗೆ ಹೋಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳ ಶವ ಪತ್ತೆ

https://newsfirstlive.com/wp-content/uploads/2024/02/MNG-DIED.jpg

Load More