newsfirstkannada.com

BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

Share :

10-11-2023

    ಬಿಎಸ್​ವೈ ಅವರ ಪುತ್ರ ಹಾಗೂ ಶಾಸಕ ಬಿ.ವೈ ವಿಜೇಂದ್ರ ನೇಮಕ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನೇಮಕ ಮಾಡಿ ಆದೇಶ

    ಹಲವು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ನಡೆದಿತ್ತು ಚರ್ಚೆ

ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್​ವೈ ಅವರ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಾರನ್ನು ನೇಮಿಸುತ್ತಾರೆ ಎಂದು ಬಹಳಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಇದಕ್ಕೆ ಬಿಜೆಪಿ ಹೈಕಮಾಂಡ್ ಅಂತಿಮ ತೆರೆ ಎಳೆದಿದ್ದು ಮಾಜಿ ಸಿಎಂ ಹಾಗೂ ಶಾಸಕರಾಗಿರುವ ಬಿವೈ ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇನ್ನು ಅಧ್ಯಕ್ಷ ಸ್ಥಾನವೂ ಮತ್ತೆ ಲಿಂಗಾಯತ ಸಮುದಾಯಕ್ಕೆ ಒಲಿದಿರುವುದು ಒಂದು ಕಡೆಯಾದರೆ, ಶಿವಮೊಗ್ಗ ಜಿಲ್ಲೆಯವರು ಮತ್ತೊಮ್ಮೆ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯವನ್ನು ಬಿಜೆಪಿಯತ್ತ ಸೆಳೆಯಲು ಹಾಗೂ ಯುವ ನಾಯಕರಾಗಿದ್ದರಿಂದ ಪಕ್ಷದ ವರ್ಚಸ್ಸು ಮತ್ತಷ್ಟು ಹೆಚ್ಚಲಿದೆ ಎನ್ನುವ ಕಾರಣಕ್ಕೆ ಶಾಸಕ ಬಿ.ವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಬಿ.ವೈ ವಿಜಯೇಂದ್ರ ಅವರು ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕರು ಆಗಿರುವ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಆಗಿದ್ದಾರೆ. ಅಲ್ಲದೇ ಶಿವಮೊಗ್ಗದ ಶಿಕಾರಿಪುರ ಕ್ಷೇತ್ರದ ಶಾಸಕರು ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

https://newsfirstlive.com/wp-content/uploads/2023/06/bs-vijayendra-1.jpg

Load More