ಹನಿಟ್ರ್ಯಾಪ್ ಮಧ್ಯೆ ಡಿ.ಕೆ ಶಿವಕುಮಾರ್ ಮೇಲೆ ಶಾಸಕ ಮುನಿರತ್ನ ಹೊಸ ಬಾಂಬ್‌; ಹೇಳಿದ್ದೇನು?

author-image
admin
Updated On
ಹನಿಟ್ರ್ಯಾಪ್ ಮಧ್ಯೆ ಡಿ.ಕೆ ಶಿವಕುಮಾರ್ ಮೇಲೆ ಶಾಸಕ ಮುನಿರತ್ನ ಹೊಸ ಬಾಂಬ್‌; ಹೇಳಿದ್ದೇನು?
Advertisment
  • ನನಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಂದ ಅನ್ಯಾಯ ಆಗಿದೆ
  • ರಮೇಶ್ ಜಾರಕಿಹೊಳಿ, ಹೆಚ್‌.ಡಿ ರೇವಣ್ಣ ಮೇಲೂ ಇದೇ ಕುತಂತ್ರ
  • ಡಿ.ಕೆ ಶಿವಕುಮಾರ್ ಅವರಿಗೆ ಈ ಮಹಾ ಪಾಪದ ಕೆಲಸ ಯಾಕೆ ಬೇಕು?

ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಹಂಗಾಮ ಜೋರಾಗಿದೆ. ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಜಾಲದ ಬಗ್ಗೆ ಬಿಸಿ, ಬಿಸಿ ಚರ್ಚೆಯಾಗಿದ್ದು, ಸಚಿವ ಕೆ.ಎನ್‌ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ಆಗಿರೋದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಒಬ್ಬರೂ, ಇಬ್ಬರಲ್ಲ 48 ನಾಯಕರ ಹನಿಟ್ರ್ಯಾಪ್ ವಿಡಿಯೋ ಇರೋ ಮಾಹಿತಿ ನನಗಿದೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಈ ಹನಿಟ್ರ್ಯಾಪ್ ವಿಚಾರದ ಬಗ್ಗೆ ಚರ್ಚೆಯಾಗುತ್ತಿರುವಾಗಲೇ ಬಿಜೆಪಿ ಶಾಸಕ ಮುನಿರತ್ನ ಅವರು ರೋಷಾವೇಶದಲ್ಲಿ ಮಾತನಾಡಿದ್ದಾರೆ. ನನಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಂದ ಅನ್ಯಾಯ ಆಗಿದೆ. ನನ್ನ ವಿರುದ್ಧ ಅ*ತ್ಯಾಚಾರದ ಕೇಸ್ ಹಾಕಿಸಿದ್ದಾರೆ. ನೀನು ರಾಜೀನಾಮೆ ಕೊಟ್ರೆ ಜಾತಿ ನಿಂದನೆ ಕೇಸ್ ವಾಪಸ್ ಪಡೆಯುತ್ತೇನೆ ಅಂತ ಹೇಳಿದ್ರು ಎಂದಿದ್ದಾರೆ.

publive-image

ಇದನ್ನೂ ಓದಿ: ಒಬ್ಬರು, ಇಬ್ಬರೂ ಅಲ್ಲ.. 48 ನಾಯಕರ ಹನಿಟ್ರ್ಯಾಪ್; ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ VIDEO 

ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹೆಚ್‌.ಡಿ ರೇವಣ್ಣ ಮೇಲೂ ಇದೇ ಕುತಂತ್ರ ಮಾಡಿದ್ರು. ಈಗ ಸಚಿವ ರಾಜಣ್ಣ ಅವರ ಮೇಲೆ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರಿಗೆ ಒಂದು ಕಿವಿಮಾತು ಹೇಳ್ತೀನಿ. ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತಿದೆ. ನೀವು ರಾತ್ರಿ ಮಿಟೀಂಗ್ ಮಾಡಿದ್ದು ಗೊತ್ತಿದೆ. ಡಿ.ಕೆ ಶಿವಕುಮಾರ್ ಅವರಿಗೆ ಈ ಮಹಾ ಪಾಪದ ಕೆಲಸ ಯಾಕೆ ಬೇಕು? ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ನನಗೆ ಆಗಿರುವ ನೋವನ್ನು ನಾನು ಹೇಳಿದ್ದೀನಿ. ಸಿಸಿಟಿವಿ, ಆಡಿಯೋ ಎಲ್ಲಾ ಸಾಕ್ಷಿಗಳು ಇವೆ. ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್‌ನಲ್ಲಿ ಇದ್ದಿದ್ದು. ರಾಜಣ್ಣ ಸಹ ಕಾಂಗ್ರೆಸ್‌ನಲ್ಲಿ ಇರೋದು. ಇದು ಒಳ್ಳೆಯದು ಅಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment