newsfirstkannada.com

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಗೆ ಕೆಂಪೇಗೌಡರ ಬೆಳ್ಳಿ ಪ್ರತಿಮೆ ನೀಡಿದ ಎಂಎಲ್‌ಸಿ ಟಿ.ಎ.ಶರವಣ

Share :

Published June 14, 2024 at 9:59pm

Update June 14, 2024 at 10:04pm

  ಕೇಂದ್ರ ಸಚಿವರಾಗಿ ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ ಕುಮಾರಸ್ವಾಮಿ

  ಜೆ.ಪಿಭವನದಲ್ಲಿ ಹೆಚ್‌ಡಿಕೆ ಅವರಿಗೆ ಅಭಿನಂದನಾ ಕಾರ್ಯಕ್ರಮ

  ನಾಡಪ್ರಭು ಕೆಂಪೇಗೌಡ ಬೆಳ್ಳಿ ಪ್ರತಿಮೆ ನೀಡಿ ಗೌರವಿಸಿದ ಟಿ.ಎ ಶರವಣ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ, ಮಂಡ್ಯ ಸಂಸದ ಹೆಚ್‌.ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಹೆಚ್‌.ಡಿ ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಹೆಚ್‌ಡಿಕೆ ಅವರಿಗೆ ಭರ್ಜರಿಯಾಗಿ ಸ್ವಾಗತ ಕೋರಲಾಗಿದೆ.

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಜೆಡಿಎಸ್ ಪಕ್ಷದ ಕಚೇರಿ ಜೆ.ಪಿಭವನದಲ್ಲಿ ಹೆಚ್‌ಡಿಕೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ: ದರ್ಶನ್ ಅರೆಸ್ಟ್ ಕೇಸ್‌ಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕೊಟ್ರು ಹೊಸ ಟ್ವಿಸ್ಟ್; ಏನದು? 

ಕಾರ್ಯಕ್ರಮದಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಭಾಗಿಯಾಗಿದ್ದರು.
ಕುಮಾರಸ್ವಾಮಿ ಅವರಿಗೆ ಅಭಿನಂದಿಸುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಎಂಎಲ್‌ಸಿ ಟಿ.ಎ ಶರವಣ ಅವರು ನಾಡಪ್ರಭು ಕೆಂಪೇಗೌಡ ಬೆಳ್ಳಿ ಪ್ರತಿಮೆ ನೀಡಿ ಗೌರವಿಸಿದರು.

ಇದಾದ ಬಳಿಕ ಹೆಚ್‌.ಡಿ ಕುಮಾರಸ್ವಾಮಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು. ರಾಜಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಗೆ ಕೆಂಪೇಗೌಡರ ಬೆಳ್ಳಿ ಪ್ರತಿಮೆ ನೀಡಿದ ಎಂಎಲ್‌ಸಿ ಟಿ.ಎ.ಶರವಣ

https://newsfirstlive.com/wp-content/uploads/2024/06/HD-Kumaraswamy-TA-Saravana.jpg

Load More