BREAKING: ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಸೇರಿ ಈ ಮೂವರಿಗೆ ಕಾಂಗ್ರೆಸ್​ MLC ಟಿಕೆಟ್​​

author-image
admin
Updated On
BREAKING: ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಸೇರಿ ಈ ಮೂವರಿಗೆ ಕಾಂಗ್ರೆಸ್​ MLC ಟಿಕೆಟ್​​
Advertisment
  • ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ಉಪಚುನಾವಣೆ
  • ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನ
  • ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್‌ಗೆ ಮಣೆ

ಬೆಂಗಳೂರು: ವಿಧಾನಪರಿಷತ್ ಉಪಚುನಾವಣೆಯ ಕಣ ರಂಗೇರಿದೆ. ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ ಜಗದೀಶ್ ಶೆಟ್ಟರ್‌ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಣೆ ಹಾಕಿದ್ದಾರೆ.

ಜೂನ್ 30ರಂದು ನಡೆಯುವ MLC ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣ ಕಮಕನೂರು ಅವರ ಹೆಸರನ್ನು ಅಂತಿಮಗೊಳಿಸಿದೆ. ಎಂಎಲ್‌ಸಿ ಉಪಚುನಾವಣೆಯಲ್ಲಿ ಬಾಬುರಾವ್ ಚಿಂಚನಸೂರು ಅವರಿಗೆ ಕಾಂಗ್ರೆಸ್ ಕೊಡುವ ನಿರೀಕ್ಷೆಯಿತ್ತು. ಆದರೆ ಅನಾರೋಗ್ಯದ ಹಿನ್ನೆಲೆ ಬಾಬುರಾವ್ ಚಿಂಚನಸೂರ್‌ಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ತಿಪ್ಪಣ್ಣ ಕಮಕನೂರುಗೆ ಕಾಂಗ್ರೆಸ್ ಅವಕಾಶ ನೀಡಿದೆ.

publive-image

ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು, ಆರ್.ಶಂಕರ್‌ನಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯುತ್ತಿದೆ. ಲಕ್ಷ್ಮಣ್ ಸವದಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅಭ್ಯರ್ಥಿಯಾಗಿದ್ದಾರೆ. ಆರ್. ಶಂಕರ್ ಅವರಿಂದ ತೆರವಾದ ಸ್ಥಾನಕ್ಕೆ ತಿಪ್ಪಣ್ಣ ಕಮಕನೂರ್, ಬಾಬುರಾವ್ ಚಿಂಚನಸೂರ್‌ರಿಂದ ತೆರವಾದ ಕೇವಲ ಒಂದು ವರ್ಷದ ಸ್ಥಾನಕ್ಕೆ ಸಚಿವ ಬೋಸರಾಜುಗೆ ಅವಕಾಶ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment