ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ.. ಯಾಕೆ ಈ ಪ್ರದೇಶಗಳಲ್ಲೇ ಯುದ್ಧ ಕವಾಯತು..?

author-image
Ganesh
Updated On
ರಾಜ್ಯದ 3 ಸ್ಥಳಗಳಲ್ಲಿ ಮಾಕ್ ಡ್ರಿಲ್ ಕನ್ಫರ್ಮ್​.. ಬೆಂಗಳೂರಿನಲ್ಲಿ ಎಲ್ಲಿ ನಡೆಯುತ್ತೆ ಯುದ್ಧ ಕವಾಯತು..?
Advertisment
  • ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್​​ಗೆ ಕೇಂದ್ರ ಸೂಚನೆ
  • ಯುದ್ಧದ ಸಿದ್ಧತೆ ಹಿನ್ನೆಲೆಯಲ್ಲಿ ಯುದ್ಧ ಕವಾಯತು ಆದೇಶ
  • ಭಾರತ ಮತ್ತು ಪಾಕಿಸ್ತಾನದ ನಡುವೆ ಮುಂದುವರಿದ ಬಿಕ್ಕಟ್ಟು

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗ್ತಿದೆ. ಹೀಗಾಗಿ ಮೊನ್ನೆ ಪಂಜಾಬ್​ ಗಡಿಯಲ್ಲಿ ಸೇನೆ ಮಾಕ್​ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್​ ಡ್ರಿಲ್​​ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.

ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಮಾಕ್​ ಡ್ರಿಲ್​ ಅಂದ್ರೆ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್​ ಡ್ರಿಲ್​​ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ನಮಗೆ ಬಹುಪರಾಕ್.. 15 ರಾಷ್ಟ್ರಗಳಲ್ಲಿ ಭಾರತದ ಬೆನ್ನಿಗೆ ನಿಂತ 13 ದೇಶಗಳು..!

publive-image

ಬೆನ್ನಲ್ಲೇ ಕರ್ನಾಟಕದಲ್ಲೂ ಯುದ್ಧ ಕವಾಯತು ನಡೆಯುತ್ತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.

ಕರ್ನಾಟಕದ ವಿಚಾರಕ್ಕೆ ಬಂದರೆ.. ಎರಡು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು.

ಇದನ್ನೂ ಓದಿ: ಯುದ್ಧ ಘೋಷಣೆ ಆಗೇಬಿಡುತ್ತಾ..? ನಾಳೆ ಪ್ರಧಾನಿ ಮೋದಿಯಿಂದ ಮಹತ್ವದ ನಿರ್ಧಾರ ಸಾಧ್ಯತೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment