ಕಳೆದ ಮೂರು ದಿನಗಳಿಂದ ದೇಶಾದ್ಯಂತ ದಾಖಲೆ ಮಳೆ
ಅತಿಯಾದ ಮಳೆಯಿಂದ ದೇಶದ ಕೆಲವು ಭಾಗಗಳಲ್ಲಿ ಹಾನಿ
ಕೇಂದ್ರದ ಸಚಿವರೊಂದಿಗೆ ನರೇಂದ್ರ ಮೋದಿ ದಿಢೀರ್ ಸಭೆ
ದೆಹಲಿ: ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದುವರೆಗೂ ಮಳೆ ಅವಾಂತರಕ್ಕೆ 30ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ.
ಇನ್ನು, ದೇಶದಲ್ಲಿ ಮಳೆಯಿಂದ ಭಾರೀ ಅನಾಹುತ ಸಂಭವಿಸಿದ್ದು, ಕೂಡಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ದಿಢೀರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜತೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಅತಿಯಾದ ಮಳೆಯಿಂದ ದೇಶದ ಕೆಲವು ಭಾಗಗಳಲ್ಲಿ ಹಾನಿಯಾಗಿದೆ. ಸ್ಥಳೀಯ ಆಡಳಿತಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ತಂಡಗಳು ಸಂತ್ರಸ್ತರ ಯೋಗಕ್ಷೇಮ ನೋಡಿಕೊಳ್ಳಬೇಕು. ಭಾರೀ ಮಳೆಯಿಂದಾಗಿ ಗುಡ್ಡಗಾಡು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರೋ ಜನರನ್ನು ಕಾಪಾಡಬೇಕು ಎಂದು ಆದೇಶಿಸಿದ್ದಾರೆ ಮೋದಿ.
ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಯೇನು?
ಭಾರೀ ಮಳೆಗೆ ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿವೆ. ರಾಜಸ್ಥಾನದ ಅಜ್ಮೀರ್, ಸಿಕರ್ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ದೆಹಲಿ, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆ ಆಗುತ್ತಿದೆ. ಅಧಿಕಾರಿಗಳು ಹೆಚ್ಚು ಹಾನಿಗೊಳಗಾದ ಸ್ಥಳಗಳಲ್ಲಿನ ಜನರನ್ನು ತಲುಪಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಮುಂದಿನ 24 ಗಂಟೆಗಳ ಕಾಲ ತೀವ್ರ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ