/newsfirstlive-kannada/media/post_attachments/wp-content/uploads/2024/06/pm-modi2.jpg)
ದೇಶದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರದ ಗದ್ದುಗೆ ಹಿಡಿಯುತ್ತಿದೆ. ಮಿತ್ರಪಕ್ಷಗಳ ಜೊತೆ ಸೇರಿ ಕೇಸರಿ ಸೇನೆ ಭವ್ಯ ಭಾರತದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಕ್ಷಣಗಣನೆ ಶುರುವಾಗಿದೆ. ದೇಶ-ವಿದೇಶಗಳ ಗಣ್ಯರು ನರೇಂದ್ರ ಮೋದಿಯ ಮತ್ತೊಂದು ಯುಗಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಇದನ್ನೂ ಓದಿ: ಉಪ್ಪಿನಕಾಯಿ ಮಾರಾಟದಿಂದ ಸಾಮ್ರಾಜ್ಯ ಕಟ್ಟಿದ ಧೀಮಂತ.. ರಾಮೋಜಿ ರಾವ್ ಬದುಕಿನ ರೋಚಕ ಕಥೆ ಇಲ್ಲಿದೆ
/newsfirstlive-kannada/media/post_attachments/wp-content/uploads/2024/06/pm-modi3.jpg)
ಇಂದು ಸೂರ್ಯಾಸ್ತ ಇತಿಹಾಸದ ಪುಟದಲ್ಲಿ ಅಚ್ಚಳಿಯದ ದಾಖಲೆಗೆ ಸಾಕ್ಷಿ ಆಗಲಿದೆ. ಮುಸ್ಸಂಜೆ ವೇಳೆ ಡೆಲ್ಲಿಯಲ್ಲಿ ಹೊಸ ಸರ್ಕಾರದ ಸೂರ್ಯೋದಯ ಆಗಲಿದೆ. ಲೋಕಸಭೆ ಎಲೆಕ್ಷನ್​​​ನಲ್ಲಿ ಭರ್ಜರಿ ಜಯ ದಾಖಲಿಸಿದ ಎನ್​​ಡಿಎ, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಭವ್ಯ ಭಾರತದ ಅಧಿಪತಿಯಾಗಿ ನಮೋ ಸಿಂಹಾಸನ ಏರಲಿದ್ದಾರೆ. ನರೇಂದ್ರ ಮೋದಿಯ ಐತಿಹಾಸಿಕ ದಾಖಲೆಗೆ ಇಡೀ ವಿಶ್ವವೇ ಸಾಕ್ಷಿಯಾಗಲಿದೆ. 1962ರ ಬಳಿಕ ಮೊದಲ ಬಾರಿಗೆ ದೇಶದಲ್ಲಿ ತ್ರಿವಿಕ್ರಮ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಶುರುವಾಗಿದೆ.
3ನೇ ಬಾರಿಗೆ ಅಖಂಡ ಭಾರತದ ಆಡಳಿತ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ. ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಗದ್ದುಗೆ ಏರಲು ನಮೋ ಸನ್ನದ್ಧರಾಗಿದ್ದಾರೆ. ದೇಶವಾಸಿಗಳು ನೀಡಿದ ತೀರ್ಪಿನಂತೆ ಎನ್‌ಡಿಎ ಒಕ್ಕೂಟದ ಪ್ರಧಾನಮಂತ್ರಿಯಾಗಿ ಇಂದು ಮೋದಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಇಂದು ಪ್ರಮಾಣ ವಚನಕ್ಕೂ ಮುನ್ನ ನರೇಂದ್ರ ಮೋದಿ ರಾಜಘಾಟ್‌ಗೆ ತೆರಳಿ ಮಹಾತ್ಮಗಾಂಧಿ ಸಮಾಧಿಗೆ ನಮನ ಸಲ್ಲಿಸಿ ಬಳಿಕ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
/newsfirstlive-kannada/media/post_attachments/wp-content/uploads/2024/06/PM-modi-NDA-1.jpg)
ಇಂದು ಮೋದಿ ಪದಗ್ರಹಣ
ಸರ್ಕಾರ ರಚನೆಗಾಗಿ ಮೋದಿ ಹಕ್ಕು ಮಂಡಿಸಿದ್ದಾರೆ. ಇಂದು ಸಂಜೆ 7 ಗಂಟೆ 15 ನಿಮಿಷಕ್ಕೆ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ದೆಹಲಿಯಲ್ಲಿರೋ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮೋದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿಯನ್ನ ಬೋಧಿಸಲಿದ್ದಾರೆ. ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರುವ ಸಮಾರಂಭಕ್ಕೆ ಸಾರ್ಕ್ ದೇಶಗಳ ಪ್ರಮುಖರನ್ನ ಆಹ್ವಾನಿಸಲಾಗಿದೆ. ದೆಹಲಿಯ ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರ್ಡ್ಜ್ ಹಾಗೂ ಒಬೆರಾಯ್ ಹೊಟೇಲ್​ಗಳನ್ನ ಗಣ್ಯರಿಗೆ ಕಾಯ್ದಿರಿಸಲಾಗಿದೆ. ರಾಷ್ಟ್ರಪತಿ ಭವನಕ್ಕೆ ತೆರಳುವ ಮತ್ತು ಮರಳುವ ಮಾರ್ಗದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ.
ಯಾರಿಗೆಲ್ಲಾ ಆಹ್ವಾನ?
ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಇಂದು ಪದಗ್ರಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸೀಷೆಲ್ಸ್ ಅಧ್ಯಕ್ಷ ವಾವೆಲ್ ರಾಮ್ ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ ಕೂಡಾ ಪದಗ್ರಹಣ ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗನ್ನಾಥ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಕೂಡಾ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
/newsfirstlive-kannada/media/post_attachments/wp-content/uploads/2024/06/PM_MODI.jpg)
ದೇಶ-ವಿದೇಶಿ ಗಣ್ಯರ ಜೊತೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಪದಗ್ರಹಣ ಕಾರ್ಯಕ್ರಮದಲ್ಲಿ ಸುಮಾರು 8 ರಿಂದ 10 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ. ಇಂದಿನಿಂದ ಭವ್ಯ ಭಾರತದಲ್ಲಿ ಎನ್‌ಡಿಎ ಸರ್ಕಾರದ ಸೂರ್ಯೋದಯವಾಗಲಿದೆ. ನೆಹರೂ ಬಳಿಕ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರೋ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ. ಇಂದು ಸಂಜೆಯಿಂದ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ನಮೋ ಯುಗ ಆರಂಭವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us