newsfirstkannada.com

‘ಮೋದಿ ಜನಪ್ರಿಯತೆ ಎಲ್ಲಿದೆ, ಇಂತಹ ಸುಳ್ಳುಗಾರನನ್ನು ನಾನು ನೋಡೇ ಇಲ್ಲ’- ಸಿದ್ದರಾಮಯ್ಯ

Share :

25-06-2023

    ಮಹಾರಾಷ್ಟ್ರದ ಸಾಂಗ್ಲಿಯಲ್ಲೂ ಅಬ್ಬರಿಸಿದ ಸಿಎಂ ಸಿದ್ದರಾಮಯ್ಯ

    ಪ್ರಧಾನಿಯೇ ಪ್ರಚಾರ ಮಾಡಿದ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ

    ಅಕ್ಕಿ ಕೊಡುವ ಯೋಜನೆಗೂ ಕೇಂದ್ರ ಸರ್ಕಾರ ಅಡ್ಡಗಾಲು

ಸಾಂಗ್ಲಿ: ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುಸಿಯುತ್ತಿದೆ. ಇಂತಹ ಸುಳ್ಳುಗಾರನನ್ನು 40 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ನೋಡೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇವತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಅಭಿನಂದನೆ ಸಲ್ಲಿಸುವ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಱಲಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಕ್ಸಮರ ನಡೆಸಿದ್ದಾರೆ.

ನರೇಂದ್ರ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಇದು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಗಳಿಂದ ಸ್ಪಷ್ಟವಾಗಿದೆ. ಬಿಜೆಪಿ ಹಾಗೂ RSS ಧರ್ಮ, ಪ್ರದೇಶ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಅನ್ನಭಾಗ್ಯ ಯೋಜನೆ ಬಗ್ಗೆ ಪ್ರಸ್ತಾಪಿಸಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ಕೊಡುವ ಯೋಜನೆಗೂ ಅಡ್ಡಗಾಲಾಗಿದೆ. ಭಾರತೀಯ ಆಹಾರ ನಿಗಮದ ಮೂಲಕ ಕಡಿಮೆ ದರದ ಅಕ್ಕಿ ಪೂರೈಕೆಯನ್ನು ಉದ್ದೇಶಪೂರ್ವಕವಾಗಿ ತಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಬಿಜೆಪಿ. ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಇನ್ನು, ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಜನಾದೇಶದಿಂದ ಗೆದ್ದಿಲ್ಲ. ಶಾಸಕರಿಗೆ ಹಣದ ಆಮಿಷ ಒಡ್ಡುವ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದೆ. ಈ ಬಾರಿಯ ಚುನಾವಣೆಯಲ್ಲೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಅನ್ನು ಸೋಲಿಸಲು ರಾಜ್ಯದಲ್ಲೇ ಬೀಡು ಬಿಟ್ಟಿದ್ದರು. ಆದರೆ ಜನರು ಅವರನ್ನ ಸೋಲಿಸಿದ್ದಾರೆ. ಪ್ರಧಾನಿಯೇ ಪ್ರಚಾರ ಮಾಡಿದ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಇದರ ಅರ್ಥ ಮೋದಿ ಜನಪ್ರಿಯತೆ ಕುಸಿಯುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಮುಂದಿನ ವರ್ಷ ಮಹಾರಾಷ್ಟ್ರದಲ್ಲೂ ಚುನಾವಣೆ ಎದುರಾಗುತ್ತಿದ್ದು, ಪಕ್ಷ ಸಂಘಟನೆಗೆ ಸಜ್ಜಾಗುವಂತೆ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

‘ಮೋದಿ ಜನಪ್ರಿಯತೆ ಎಲ್ಲಿದೆ, ಇಂತಹ ಸುಳ್ಳುಗಾರನನ್ನು ನಾನು ನೋಡೇ ಇಲ್ಲ’- ಸಿದ್ದರಾಮಯ್ಯ

https://newsfirstlive.com/wp-content/uploads/2023/06/Siddaramaiah-Cm-4.jpg

Load More