/newsfirstlive-kannada/media/post_attachments/wp-content/uploads/2025/01/Team-India-11.jpg)
ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿ ಭಾರೀ ಕುತೂಹಲ ಹುಟ್ಟು ಹಾಕಿದೆ. ಈಗಾಗಲೇ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದಿದೆ. 3-1 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
ಇಂದು ಭಾರತ, ಇಂಗ್ಲೆಂಡ್ ಮಧ್ಯೆ ಕೊನೆಯ ಟಿ20 ನಡೆಯಲಿದೆ. ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಭಾರೀ ಬದಲಾವಣೆ ಆಗೋ ಸಾಧ್ಯತೆಗಳು ಹೆಚ್ಚಿವೆ. ಟೀಮ್ ಇಂಡಿಯಾ ಪರ ವೇಗದ ಬೌಲರ್ ಮೊಹಮ್ಮದ್ ಶಮಿ ಆಡೋ ನಿರೀಕ್ಷೆ ಇದೆ.
ಶಮಿಗೆ ಚಾನ್ಸ್
ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ. ಇವರು 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ರು. ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗದ ಕಾರಣ ಇವರನ್ನು 4ನೇ ಟಿ20ಯಿಂದ ಬೆಂಚ್ ಕಾಯಿಸಲಾಗಿತ್ತು. ಇಂದಿನ ಕೊನೆಯ ಪಂದ್ಯಕ್ಕೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಶಮಿ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.
ಸ್ಫೋಟಕ ಸುಳಿವು ಕೊಟ್ಟ ಕೋಚ್
ಇನ್ನು, ಈ ಕುರಿತು ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಮೋರ್ನೆ ಮಾರ್ಕೆಲ್ ಸ್ಫೋಟಕ ಸುಳಿವು ಕೊಟ್ಟಿದ್ದಾರೆ. ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಇದುವರೆಗೆ ಕೇವಲ 1 ಪಂದ್ಯ ಮಾತ್ರ ಆಡಿದ್ದಾರೆ. ಶಮಿ ಚೆನ್ನಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಅಭ್ಯಾಸದ ವೇಳೆ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ರು. ಇವರು ಮುಂದಿನ ಪಂದ್ಯದಲ್ಲಿ ಅವಕಾಶ ಪಡೆಯಲಿದ್ದಾರೆ ಎಂದರು.
ಇದನ್ನೂ ಓದಿ:RCB ಸ್ಟಾರ್ ಕೃನಾಲ್ ಪಾಂಡ್ಯ ಮುನ್ನಡೆಸುತ್ತಿರೋ ತಂಡದ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ