newsfirstkannada.com

ಮಂಗನ ದಾಳಿಯಿಂದ ವ್ಯಕ್ತಿ ಬಲಿ.. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಚಿವ

Share :

13-11-2023

    ಊರಲ್ಲಿ ಕರಡಿ, ಚಿರತೆ, ಮಂಗಗಳ ಕಾಟ ಹೆಚ್ಚಾಗಿದೆಂದು ದೂರು

    ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಧೈರ್ಯ ಹೇಳಿದರು

    ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಚಿವ

ದಾವಣಗೆರೆ: ಸದ್ಯ ರಾಜ್ಯದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಂತ ನಗರದಲ್ಲಿ ಎರಡೇರಡು ಚಿರತೆಗಳು ಪ್ರತ್ಯಕ್ಷವಾಗಿ ಭಯ ಮೂಡಿಸಿದ್ದವು. ಇದನ್ನು ಮರೆಯುವ ಮುನ್ನವೇ ಹೊನ್ನಾಳಿ ತಾಲೂಕಿನ ಗ್ರಾಮವೊಂದರಲ್ಲಿ ಮಂಗನ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾನೆ.

ಗುತ್ಯಪ್ಪ ಎನ್ನುವರು ಮೃತ ವ್ಯಕ್ತಿ. ತಾಲೂಕಿನ ಅರಕೆರೆ ಎ.ಕೆ ಕಾಲೋನಿಯಲ್ಲಿ ಗುತ್ಯಪ್ಪ ಮೇಲೆ ಏಕಾಏಕಿ ಮಂಗ ದಾಳಿ ಮಾಡಿದ್ದರಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಈ ಮಾಹಿತಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಅಂತಿಮ ದರ್ಶನ ಪಡೆದು ಮೃತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಗ್ರಾಮಸ್ಥರೊಂದಿಗೆ ಮಾಜಿ ಸಚಿವ ರೇಣುಕಾಚಾರ್ಯ

ಇನ್ನು ಇದೇ ವೇಳೆ ರೇಣುಕಾಚಾರ್ಯ ಗ್ರಾಮಸ್ಥರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ಭಾಗದಲ್ಲಿ ಕರಡಿ, ಚಿರತೆ, ಮಂಗಗಳ ಕಾಟ ಹೆಚ್ಚಾಗಿದೆ. ಮನೆಯಿಂದ ಹೊರಗೆ ಬರುವುದಕ್ಕೆ ಭಯವಾಗುತ್ತಿದೆ ಎಂದು ಗ್ರಾಮಸ್ಥರು ದೂರು ಹೇಳಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಮಾಜಿ ಸಚಿವರು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗನ ದಾಳಿಯಿಂದ ವ್ಯಕ್ತಿ ಬಲಿ.. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಚಿವ

https://newsfirstlive.com/wp-content/uploads/2023/11/DVG_MONKEY_ATTACK.jpg

Load More