newsfirstkannada.com

ಅನ್ಯ ಕೋಮಿನ ಯುವತಿ ಜೊತೆ ಪ್ರೀತಿ, ಪ್ರೇಮ ಆರೋಪ; ಯಾದಗಿರಿಯಲ್ಲಿ ನೈತಿಕ ಪೊಲೀಸ್​ಗಿರಿ

Share :

Published March 20, 2024 at 2:40pm

  ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ ಆರೋಪ

  ಬಜರಂಗದಳ ಕಾರ್ಯಕರ್ತರ ವಿರುದ್ಧ ಗಂಭೀರ ಆರೋಪ

  ಕೇಸ್ ದಾಖಲಾಗ್ತಿದ್ದಂತೆ ಆರೋಪಿಗಳು ನಾಪತ್ತೆ ಆಗಿದ್ದಾರೆ

ಅನ್ಯ ಕೋಮಿನ ಯುವತಿ ಪ್ರೀತಿಸಿದ ವಿಚಾರಕ್ಕೆ ಯಾದಗಿರಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬಜರಂಗದಳ ಸಂಘಟನೆ ಕಾರ್ಯಕರ್ತರು ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, 9 ಆರೋಪಿಗಳು ಯುವಕನನ್ನ ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ.

ಯಾದಗಿರಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನಿಂದ ಮನೆಗೆ ಬರುತ್ತಿದ್ದ ಯುವಕನನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಬೆನ್ನಿಗೆ ಬಾಸುಂಡೆ ಬರುವ ರೀತಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿರೋ ಫೋಟೋ ವೈರಲ್ ಆಗಿದೆ. ಸತತ ಐದು ಗಂಟೆಗಳ ಕಾಲ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಯಾದಗಿರಿ ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್ ಎಂಬ ಯುವಕ ನೈತಿಕ ಪೊಲೀಸ್​ಗಿರಿಗೆ ಒಳಗಾಗಿದ್ದಾನೆ. ಹೊಟ್ಟೆಗೆ ಚಾಕು ಹಾಕಿ ಕೊಲೆ ಮಾಡಲು ಗ್ಯಾಂಗ್ ಯತ್ನಿಸಿದೆ ಎಂದು ಆರೋಪಿಸಿದ್ದಾನೆ. ತಪ್ಪಾಗಿದೆ ಅಂತ ಕಾಲಿಗೆ ಬಿದ್ದು ಜೀವ ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾನೆ.

ಶಿವಕುಮಾರ್, ತಾಯಪ್ಪ, ಮಲ್ಲು, ಅಂಬರೀಶ್ ಸೇರಿ 9 ಆರೋಪಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 148, 307, 323, 341, 342, 363, 504 ಹಾಗೂ 506 ಕಲಂ ಅಡಿಯಲ್ಲಿ ದೂರು ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನ್ಯ ಕೋಮಿನ ಯುವತಿ ಜೊತೆ ಪ್ರೀತಿ, ಪ್ರೇಮ ಆರೋಪ; ಯಾದಗಿರಿಯಲ್ಲಿ ನೈತಿಕ ಪೊಲೀಸ್​ಗಿರಿ

https://newsfirstlive.com/wp-content/uploads/2024/03/YDR-MORAL-POLICEGIRI.jpg

Load More