newsfirstkannada.com

ಹಾಸ್ಟೆಲ್​ ಊಟ ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share :

17-07-2023

    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಘಟನೆ

    ಚಿಕನ್ ಸಾಂಬಾರ್ ಸೇವಿಸಿ ಅಸ್ವಸ್ಥರಾದ 10ಕ್ಕೂ ಹೆಚ್ಚು ಮಕ್ಕಳು

    ಮಕ್ಕಳನ್ನು ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಚಾಮರಾಜನಗರ: ಹಾಸ್ಟೆಲ್ ಊಟ ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದೆ, ಮಕ್ಕಳು ಹಾಸ್ಟೆಲ್​ನಲ್ಲಿ ನಿನ್ನೆ ಚಿಕನ್ ಸಾಂಬಾರ್ ಸೇವಿಸಿದ್ದಾರೆ. ವಿಪರೀತ ಖಾರ ಹಾಕಿದ್ದರಿಂದ ಮಕ್ಕಳಿಗೆ ಎದೆಯುರಿತ, ಕೆಮ್ಮು, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಸದ್ಯ ಮಕ್ಕಳನ್ನು ಬೇಗೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸ್ಟೆಲ್​ ಊಟ ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2023/07/Hostel-Sick.jpg

Load More