newsfirstkannada.com

×

ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥ

Share :

Published July 16, 2023 at 3:30pm

Update July 16, 2023 at 3:31pm

    ನಲ್ಲಿ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥ

    10ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡ ವಾಂತಿ, ಭೇದಿ, ಜ್ವರ

    ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜನರು

ತುಮಕೂರು: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ತಾತಯ್ಯನ ಗುಡಿಯ ಬಳಿ ನಡೆದಿದೆ. ನಲ್ಲಿ ನೀರಿಗೆ ಚರಂಡಿ ನೀರು ಸೇರಿದ ಪರಿಣಾಮ ಈ ಅವಘಡ ಸಂಭವಿಸಿದೆ.

ಗೇಟ್ ವಾಲ್​​ಗಳ ಮೂಲಕ ನಲ್ಲಿ ನೀರಿಗೆ ಕಲುಷಿತ ನೀರು ಸೇರಿದೆ. ಹೀಗಾಗಿ ಈ ನೀರನ್ನು ಕುಡಿದ 10ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ, ಜ್ವರ ಕಾಣಿಸಿಕೊಂಡಿದೆ. ಸದ್ಯ ಅಸ್ವಸ್ಥರನ್ನು ಪಾವಗಡ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಘಟನೆ ಬಗ್ಗೆ ಕೇಳಿದಂತೆ ತಹಶೀಲ್ದಾರ್ ಸುಜಾತಾ,ಇಒ ಶಿವರಾಜಯ್ಯ ಹಾಗೂ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥ

https://newsfirstlive.com/wp-content/uploads/2023/07/Tumkur.jpg

Load More