newsfirstkannada.com

ಮದುವೆ ಊಟ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ; ಗ್ರಾಮದಲ್ಲೇ ಠಿಕಾಣಿ ಹೂಡಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು

Share :

29-08-2023

    ಮದುವೆ ಊಟ ಸೇವಿಸಿದವರಿಗೆ ವಾಂತಿ ಭೇದಿ

    ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆ ಸೇರಿದ ಊರವರು

    ಚಿಕನ್​ ಊಟ ಸವಿದವರಿಗೆ ಶುರುವಾಯ್ತು ಅನಾರೋಗ್ಯ

ಚಿಕ್ಕೋಡಿ: ಮದುವೆ ಊಟ ಸೇವಿಸಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಮಾಂಸಾಹಾರ ಸೇವಿಸಿದ ಬಹುತೇಕ ಜನರಲ್ಲಿ ವಾಂತಿ ಬೇಧಿ ಕಾಣಿಸಿದೆ.

ನಿನ್ನೆ ಗ್ರಾಮದ ಹಿರೇಕೋಡಿಯಲ್ಲಿ ಪಟೇಲ್ ಕುಟುಂಬದ ಮದುವೆ ಸಮಾರಂಭ ನಡೆದಿತ್ತು. ಮದುವೆಗೆ ಬಂದ ಜನರಿಗೆ ಸಸ್ಯಾಹಾರ, ಮಾಂಸಾಹಾರ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಾಂಸಾಹಾರ ಸೇವಿಸಿದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ರೈಸ್ ಮತ್ತು ಚಿಕನ್ ಸೇವಿಸಿದ ನೂರಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ.

ಇನ್ನು ಅಸ್ವಸ್ಥರಾಗ ಜನರನ್ನು ಕಂಡು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಿರೇಕೋಡಿ ಗ್ರಾಮದಲ್ಲೇ ಠಿಕಾಣಿ ಹೂಡಿದ್ದಾರೆ. ಅಲ್ಲಿನ ಸರ್ಕಾರಿ ಶಾಲೆಯಲ್ಲಿ ಬೀಡುಬಿಟ್ಟು ಅಸ್ವಸ್ಥರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮದುವೆ ಊಟ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ; ಗ್ರಾಮದಲ್ಲೇ ಠಿಕಾಣಿ ಹೂಡಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು

https://newsfirstlive.com/wp-content/uploads/2023/08/Indian_Marriage.jpg

Load More