newsfirstkannada.com

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Share :

Published April 26, 2024 at 6:26am

Update April 26, 2024 at 6:30am

    ಮಧ್ಯಾಹ್ನ ಮದುವೆ ಊಟ ಸವಿದ ಊರ ಜನರು

    ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ

    ಜನರಲ್ಲಿ ಕಾಣಿಸಿಕೊಂಡ ವಾಂತಿಯಿಂದಾಗಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಫುಲ್​

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ.

ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೋಟ್​​ ಮಾಡೋರಿಗೆ ಗುಡ್​ನ್ಯೂಸ್​​.. ಫ್ರೀ ಊಟ, ಬಿಯರ್​ ಎಲ್ಲಾ ಸಿಗುತ್ತೆ; ಎಲ್ಲಿ ಗೊತ್ತಾ?

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

https://newsfirstlive.com/wp-content/uploads/2024/04/married.jpg

Load More