newsfirstkannada.com

BREAKING: ಭೀಕರ ಅಗ್ನಿ ದುರಂತ; ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಸಾವು

Share :

Published May 25, 2024 at 9:27pm

  ಪ್ರಸಿದ್ಧ TRP ಗೇಮ್‌ ಜೋನ್‌ನಲ್ಲಿ ಭಯಾನಕ ಅಗ್ನಿ ದುರಂತ

  ಅಗ್ನಿ ಅನಾಹುತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ

  ಗೇಮ್‌ ಜೋನ್‌ನಲ್ಲಿದ್ದ ಮಕ್ಕಳನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಸಾಹಸ

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ TRP ಗೇಮ್‌ ಜೋನ್‌ನಲ್ಲಿ ಭಯಾನಕ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಹಬ್ಬಿದ್ದು, ರಕ್ಷಣಾ ಕಾರ್ಯಾಚರಣೆ ಬಹುದೊಡ್ಡ ಸವಾಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಗೇಮ್‌ ಜೋನ್‌ನಲ್ಲಿ ಮಕ್ಕಳು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಶನಿವಾರ ಮಧ್ಯಾಹ್ನ ರಾಜ್‌ಕೋಟ್‌ನ ಗೇಮ್‌ ಜೋನ್‌ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹರಸಾಹಸ ಪಡಲಾಗಿದೆ. ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಕ್ಕಳ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್‌ಕೋಟ್‌ ಪೊಲೀಸ್ ಕಮಿಷನರ್ ರಾಜು ಭಾರ್ಗವ ಅವರು ಅಗ್ನಿ ದುರಂತದ ಬಗ್ಗೆ ಮಾಹಿತಿ ನೀಡಿದ್ದಾರೆ. ಇಲ್ಲಿವರೆಗೂ 20 ಮಂದಿಯ ಶವವನ್ನು ಹೊರತೆಗೆದಿದ್ದೇವೆ. 15 ರಿಂದ 20 ಮಕ್ಕಳು ಸುರಕ್ಷಿತವಾಗಿ ಮರಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ನಾಳಿನ IPL ಫೈನಲ್​ ಪಂದ್ಯ ರದ್ದಾಗುತ್ತಾ? ಕಾರಣ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ! 

ಟಿಆರ್‌ಪಿ ಗೇಮಿಂಗ್ ಜೋನ್‌ನಲ್ಲಿ ಮಧ್ಯಾಹ್ನ ಈ ಬೆಂಕಿ ಅನಾಹುತ ಕಾಣಿಸಿಕೊಂಡಿದೆ. ಸಂಜೆ ವೇಳೆಗೆ ಬೆಂಕಿ ಹತೋಟಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಬೆಂಕಿ ಅನಾಹುತಕ್ಕೆ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಗೇಮಿಂಗ್ ಜೋನ್ ಯುವರಾಜ್ ಸಿಂಗ್ ಸೋಲಂಕಿ ಅವರಿಗೆ ಸೇರಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಭೀಕರ ಅಗ್ನಿ ದುರಂತ; ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಸಾವು

https://newsfirstlive.com/wp-content/uploads/2024/05/gujarath1.jpg

Load More