ಬೆಳ್ಳಂಬೆಳಗ್ಗೆ ಕುದುರೆಮುಖ ಪ್ರವಾಸಕ್ಕೆ ಹೋಗುತ್ತಿದ್ದ ಬಸ್​​ ಪಲ್ಟಿ.. 25ಕ್ಕೂ ಹೆಚ್ಚು ಮಂದಿಗೆ ಗಾಯ

author-image
Veena Gangani
Updated On
ಬೆಳ್ಳಂಬೆಳಗ್ಗೆ ಕುದುರೆಮುಖ ಪ್ರವಾಸಕ್ಕೆ ಹೋಗುತ್ತಿದ್ದ ಬಸ್​​ ಪಲ್ಟಿ.. 25ಕ್ಕೂ ಹೆಚ್ಚು ಮಂದಿಗೆ ಗಾಯ
Advertisment
  • ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಘಟನೆ
  • ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸ ಹೋಗ್ತಿದ್ದ ಬಸ್
  • ಗಾಯಾಳುಗಳು ಮೂಡಿಗೆರೆ, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲು

ಚಿಕ್ಕಮಂಗಳೂರು: ಪ್ರವಾಸಕ್ಕೆ ಹೋಗುತ್ತಿದ್ದ ಬಸ್​ ಪಲ್ಟಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ:ಪದವಿ ಓದಿದವರಿಗೆ ಸಿಹಿ ಸುದ್ದಿ.. 1500 ಅಪ್ರೆಂಟಿಸ್​ ಉದ್ಯೋಗಗಳಿಗೆ ಅರ್ಜಿ ಆಹ್ವಾನ

publive-image

ಬಸ್ಸಿನಲ್ಲಿದ್ದ ಯುವತಿಯರು ಎಂ.ಎನ್.ಸಿ‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ವೀಕೆಂಡ್ ಹಿನ್ನೆಲೆ 40ಕ್ಕೂ ಹೆಚ್ಚು ಜನ ಟ್ರಕ್ಕಿಂಗ್​ಗಾಗಿ ಬರುತ್ತಿದ್ದರು. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸ ಹೋಗ್ತಿದ್ದ ವೇಳೆ ​​ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಲ್ಲದೇ ಇಬ್ಬರ ಸ್ಥಿತಿ ಗಂಭೀರವಾಗಿದೆ.

publive-image

ನೇತ್ರಾವತಿ ಪೀಕ್ ಟ್ರಕ್ಕಿಂಗ್​​ಗೆ ಬಂದಿದ್ದ ಯುವಕ, ಯುವತಿಯರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳಿಗೆ ಮೂಡಿಗೆರೆ, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment