ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಪ್ಪನದೊಡ್ಡಿ ಗ್ರಾಮದಲ್ಲಿ ಘಟನೆ
ಮಧ್ಯಾಹ್ನದ ಬಿಸಿಯೂಟ ಸೇವಿಸಿ 70ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ
200 ಮಕ್ಕಳಲ್ಲಿ 70 ಮಕ್ಕಳು ರಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು
ರಾಯಚೂರು: ಬಿಸಿಯೂಟ ಸೇವಿಸಿ 70ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡಿರೋ ಘಟನೆ ಅಪ್ಪನದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಪ್ಪನದೊಡ್ಡಿ ಗ್ರಾಮದಲ್ಲಿ 200 ಕ್ಕೂ ಹೆಚ್ಚು ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದರು. ಅದರಲ್ಲಿ 70ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ.
ಅಡುಗೆ ಮಾಡುವಾಗ ಸ್ವಚ್ಛತೆ ಕಾಪಾಡದೇ ಸಿಬ್ಬಂದಿ ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿ ಬಂದಿದೆ. ಜೊತೆಗೆ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಕಾರಣ 50 ಮಕ್ಕಳನ್ನು ರಿಮ್ಸ್ ಆಸ್ಪತ್ರೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ