ಓರ್ವ ಯುವತಿ ಸ್ಥಿತಿ ಚಿಂತಾಜನಕ, ಖಾಸಗಿ ಆಸ್ಪತ್ರೆಗೆ ದಾಖಲು
ಅವರಲ್ಲಿ 8 ಮಕ್ಕಳ ಸ್ಥಿತಿ ಗಂಭೀರ ಎಂದ ವೈದ್ಯರು
ಘಟನಾ ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಭೇಟಿ
ಚಿತ್ರದುರ್ಗ: ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು ಘಟನೆ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮಂಜುಳಾ (32) ಮೃತ ಮಹಿಳೆ. ಇನ್ನೋರ್ವ ಯುವತಿಯ ಸೃಷ್ಟಿ (18) ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಮಾರು 8 ಮಕ್ಕಳು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸ್ಟಿಕ್ ಸರ್ಜನ್ ಬಸವರಾಜ್ ಭೇಟಿ ನೀಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕೆಲವು ಮಕ್ಕಳ ಸ್ಥಿತಿ ಗಂಭೀರ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ