/newsfirstlive-kannada/media/post_attachments/wp-content/uploads/2024/08/Shiv.jpg)
ಶಿವಮೊಗ್ಗ: ತಾಯಿಯೊಬ್ಬಳು ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯ ಚಂಪಕಾಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತ ದುರ್ದೈವಿಗಳು. ನಿನ್ನೆ ರಾತ್ರಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.
ಇದನ್ನೂ ಓದಿ: ಬೆಕ್ಕು ಸಾಕುವವರೇ ಹುಷಾರ್​! ಶಿವಮೊಗ್ಗದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವು
ಘಟನಾ ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ರಮೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಎತ್ತಿ ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಕಾರುಗಳಲ್ಲಿ ಕಾಣಿಸಿಕೊಂಡ ದೋಷ.. 1.72 ಲಕ್ಷಕ್ಕೂ ಹೆಚ್ಚಿನ ಕಾರುಗಳನ್ನು ಹಿಂಪಡೆದ ನಾಲ್ಕು ಕಂಪನಿಗಳು!
ಇನ್ನು ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us