newsfirstkannada.com

ವಿದ್ಯುತ್ ತಂತಿ ತುಳಿದು ತಾಯಿ-ಮಗಳ ಸಾವು.. ಬೆಸ್ಕಾಂಗೆ ಬಿಸಿ ಮುಟ್ಟಿಸಿದ ಸಚಿವ ಕೆ.ಜೆ ಜಾರ್ಜ್‌; ಪರಿಹಾರ ಘೋಷಣೆ

Share :

19-11-2023

    ಬೆಳಗಿನ ಜಾವ ರಸ್ತೆ ಬದಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ಕರೆಂಟ್ ಲೈನ್

    ಇದಕ್ಕೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ-ಕೆಜೆ ಜಾರ್ಜ್

    ಮೃತ ತಾಯಿ ಮಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ಯಾರದ್ದೋ ನಿರ್ಲಕ್ಷ್ಯಕ್ಕೆ ಇನ್ಯಾರೋ ಬಲಿಯಾಗೋದು ನಿಜಕ್ಕೂ ಅನ್ಯಾಯ. ಇಂತಹ ಅದೆಷ್ಟೋ ಘಟನೆಗಳನ್ನ ನಾವು ನೋಡಿರ್ತೀವಿ. ಅದೇ ರೀತಿ ಬೆಸ್ಕಾಂ ಅಧಿಕಾರಿಗಳ ನಿರ್ಲ್ಯಕ್ಷ್ಯದಿಂದ ಬೆಂಗಳೂರಲ್ಲಿ ತಾಯಿ, ಮಗು ಇಬ್ಬರು ಸುಟ್ಟು ಹೋಗಿ ಜೀವ ಕಳ್ಕೊಂಡಿದ್ದಾರೆ.

ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ನಗರದ ವೈಟ್​​ಫೀಲ್ಡ್​​ನ ಕಾಡುಗೋಡಿಯಲ್ಲಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಡೆದಿತ್ತು. ತಮಿಳುನಾಡು ಮೂಲದ ಸೌಂದರ್ಯ (23), ಮಗಳು ಸುವಿಕ್ಸ ಲಿಯಾ (9 ತಿಂಗಳು) ಮೃತ ದುರ್ದೈವಿಗಳು.

ಬೆಸ್ಕಾಂ ನಿರ್ಲಕ್ಷ್ಯತನದಿಂದ ತಾಯಿ, ಮಗಳು ಬಲಿಯಾಗಿದ್ದರು. ಇದೇ ಕೇಸ್​ಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್​ ಅವರು ಇದಕ್ಕೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾ Xನಲ್ಲಿ ಟ್ವೀಟ್​​ ಮಾಡಿರುವ ಕೆ.ಜೆ ಜಾರ್ಜ್‌ ಅವರು ಮೃತ ತಾಯಿ, ಮಗಳ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಭರವಸೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯುತ್ ತಂತಿ ತುಳಿದು ತಾಯಿ-ಮಗಳ ಸಾವು.. ಬೆಸ್ಕಾಂಗೆ ಬಿಸಿ ಮುಟ್ಟಿಸಿದ ಸಚಿವ ಕೆ.ಜೆ ಜಾರ್ಜ್‌; ಪರಿಹಾರ ಘೋಷಣೆ

https://newsfirstlive.com/wp-content/uploads/2023/11/mother.jpg

Load More