ಬೆಳಗಿನ ಜಾವ ರಸ್ತೆ ಬದಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ಕರೆಂಟ್ ಲೈನ್
ಕರೆಂಟ್ ವೈರ್ ತುಂಡಾಗಿ ಬಿದ್ದಿದ್ದರೂ ಬೆಸ್ಕಂ ಸಿಬ್ಬಂದಿ ಸರಿ ಮಾಡಿರಲಿಲ್ಲ
ತಮಿಳುನಾಡಿನಿಂದ ಬರುತ್ತಿದ್ದ ತಾಯಿ, ಮಗಳಿಗೆ ಕಾದು ಕುಳಿತ್ತಿದ್ದ ಯಮ
ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಬೆಸ್ಕಾಂ ಅಧಿಕಾರಿಗಳು ಸೇರಿ ಸಿಬ್ಬಂದಿಯನ್ನ ಅರೆಸ್ಟ್ ಮಾಡಿರೋ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕಾರ್ಯ ನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್ಅವರ ವಿಚಾರಣೆ ನಡೆಸಿದ್ದಾರೆ.
ಮತ್ತೊಂದು ಕಡೆ ಇವತ್ತು ಖಾಸಗಿ ಆಸ್ಪತ್ರೆಯಲ್ಲಿರುವ ಇಬ್ಬರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಆಗಲಿದೆ. ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ. ನಿನ್ನೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ದುರ್ಘಟನೆ ನಡೆದಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ