ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ದುರ್ಘಟನೆ
ಈಜು ಬಾರದೇ ಕೆರೆಯಲ್ಲಿ ಮುಳುಗಿ ದಾರುಣ ಸಾವು
ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ನೀರುಪಾಲು
ತುಮಕೂರು: ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ನೀರುಪಾಲಾಗಿರೋ ಘಟನೆ ಶಿರಾ ತಾಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ. ಮನು (30) ಮೃತ ದುರ್ದೈವಿ.
ಮೃತ ತಾಯಿಯು ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಅಲ್ಲೇ ಇದ್ದ ಇಬ್ಬರು ಮಕ್ಕಳು ಕೆರೆ ದಡದಲ್ಲಿ ಆಟವಾಡುತ್ತಿದ್ದರು. ಇದೇ ವೇಳೆ ಇಬ್ಬರು ಮಕ್ಕಳು ನಿಯಂತ್ರಣ ತಪ್ಪಿ ಕೆರೆಗೆ ಬಿದಿದ್ದಾರೆ. ಕೂಡಲೇ ತಾಯಿ ಕೆರೆಗೆ ಹಾರಿ ಇಬ್ಬರು ಮಕ್ಕಳನ್ನು ರಕ್ಷಿಣೆ ಮಾಡಿದ್ದಾಳೆ. ಆದರೆ ಈಜು ಬಾರದ ಕಾರಣ ತಾಯಿ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾಳೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಇಬ್ಬರು ಮಕ್ಕಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ