/newsfirstlive-kannada/media/post_attachments/wp-content/uploads/2024/06/CN_MANJUNATH.jpg)
ರಾಮನಗರ: ನೂತನ ಸಂಸದರಾದ ಡಾ.ಸಿ.ಎನ್ ಮಂಜುನಾಥ್ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಸಂಸದರಾಗಿ ಡಾ.ಸಿ.ಎನ್ ಮಂಜುನಾಥ್ ಅವರು ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ:ಭೀಕರ ರೈಲು ದುರಂತದಲ್ಲಿ ಉಸಿರು ಚೆಲ್ಲಿದ 5 ಪ್ರಯಾಣಿಕರು.. 25 ಮಂದಿ ಗಂಭೀರ; ಸಾವಿನ ಸಂಖ್ಯೆ ಹೆಚ್ಚಾಗೋ ಸಾಧ್ಯತೆ
ಕನಕಪುರ- ಸಾತನೂರು ಮಾರ್ಗ ಮಧ್ಯೆ ಡಾ.ಸಿ.ಎನ್. ಮಂಜುನಾಥ್ ಅವರು ಕಾರಿನಲ್ಲಿ ತೆರಳುವಾಗ ಅದೇ ಮಾರ್ಗದಲ್ಲೇ ಅಪಘಾತ ಸಂಭವಿಸಿತ್ತು. ಆ್ಯಕ್ಸಿಡೆಂಟ್ ಅನ್ನು ನೋಡಿ ತಮ್ಮ ಕಾರನ್ನು ನಿಲ್ಲಿಸಿದ ಸಂಸದರು ಗಾಯಾಳುಗಳನ್ನು ಪರೀಕ್ಷಿಸಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಸಂಸದರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡುತ್ತಿರುವ ವಿಡಿಯೋ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ