/newsfirstlive-kannada/media/post_attachments/wp-content/uploads/2024/06/death18.jpg)
ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಇಂದು ನಿಧನರಾಗಿದ್ದಾರೆ. ಲಚ್ಚಿ ಪೂಜಾರ್ತಿಯವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ದರ್ಶನ್ ಗ್ಯಾಂಗ್‌ಗೆ ₹40 ಲಕ್ಷ ಕೊಟ್ಟ ರಹಸ್ಯ.. ಪೊಲೀಸರಿಗೆ ಮಹತ್ವದ ಸುಳಿವು; ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್!
ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಲಚ್ಚಿ ಪೂಜಾರ್ತಿ ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತ ತಾಯಿ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ತಾಯಿ ಅಗಲಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ. ಕುಂದರ್ ಸೇರಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ