/newsfirstlive-kannada/media/post_attachments/wp-content/uploads/2024/05/PRAJWAL-REVANNA.jpg)
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಪ್ರಮುಖ ಆರೋಪಿಯಾದ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟೀಸ್ ಜಾರಿ ಮಾಡಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪ್ರಜ್ವಲ್​ ರೇವಣ್ಣ ವಿಡಿಯೋ ರಿಲೀಸ್​ ಮಾಡಿದ್ದು, ಅದರಲ್ಲಿ ತಾವು ಇದೇ ಮೇ ತಿಂಗಳು ಎಸ್‌ಐಟಿ ವಿಚಾರಣೆ ಹಾಜರಾಗುತ್ತಿರುವುದಾಗಿ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ವಿಮಾನವನ್ನು ಬುಕ್ ಮಾಡಿದ್ದಾರೆನ್ನುವ ಮಾಹಿತಿ ಕೂಡ ಲಭ್ಯವಾಗಿದೆ.
ಈ ಮಧ್ಯೆ ವಿದೇಶದಿಂದ ಬರುವ ಮುನ್ನವೇ ಪ್ರಜ್ವಲ್ ರೇವಣ್ಣ ಕೋರ್ಟ್​ ಮೊರೆ ಹೋಗಿದ್ದಾರೆ. ಪ್ರಜ್ವಲ್​​​ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರಾದ ಅರುಣ್​ ಎಂಬುವರ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅದು ಮಧ್ಯಾಹ್ನ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us