newsfirstkannada.com

‘ಸತ್ಯ ಆದಷ್ಟು ಬೇಗ ಹೊರಬರಲಿದೆ’- ಹಾಸನ ಸೆಕ್ಸ್ ಸ್ಕ್ಯಾಂಡಲ್‌ ಬಗ್ಗೆ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

Share :

Published May 1, 2024 at 4:28pm

Update May 1, 2024 at 4:29pm

    ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮೊದಲ ಪ್ರತಿಕ್ರಿಯೆ

    ವಕೀಲ ಅರುಣ್ ಜೀ ಮೂಲಕ SIT ಅಧಿಕಾರಿಗಳಿಗೆ ಪ್ರಜ್ವಲ್‌ ರೇವಣ್ಣ ಮನವಿ

    ಹಾಸನ ಅಶ್ಲೀಲ ವಿಡಿಯೋ ವೈರಲ್ ಕೇಸ್‌ನಲ್ಲಿ SIT ನೋಟಿಸ್ ನೀಡಿದ ಹಿನ್ನೆಲೆ

ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಸ್ ದಾಖಲಾಗಿದೆ. ತನಿಖೆ ನಡೆಸುತ್ತಿರುವ SIT ವಿಚಾರಣೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದೆ. SIT ನೋಟಿಸ್ ಜಾರಿಯಾದ ಬಳಿಕ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾ Xನಲ್ಲಿ ಟ್ವೀಟ್ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರ ಬರಲಿದೆ ಎಂದು ಮನವಿ ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಮೇಜರ್ ಟ್ವಿಸ್ಟ್ ಕೊಟ್ಟ ಸಿಎಂ; ಪ್ರಧಾನಿ ಮೋದಿಗೆ ಪತ್ರ; ಹೇಳಿದ್ದೇನು? 

ಪ್ರಜ್ವಲ್ ರೇವಣ್ಣ ಅವರು ವಕೀಲ ಅರುಣ್ ಜೀ ಮೂಲಕ SIT ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಾನು ಸದ್ಯ ಬೆಂಗಳೂರಿನಿಂದ ಹೊರಗಡೆ ಇದ್ದೇನೆ. ಅಲ್ಲಿಂದ ಬರಲು 7 ದಿನಗಳು ಬೇಕಾಗಲಿದೆ. ಹೀಗಾಗಿ SIT ವಿಚಾರಣೆಯನ್ನು ಎದುರಿಸಲು ಇನ್ನೊಂದು ದಿನಾಂಕ ನೀಡಲು ಮನವಿ ಮಾಡಲಾಗಿದೆ.

SIT ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ನೊಟೀಸ್‌ಗೆ 7 ದಿನ ಸಮಯಾವಕಾಶವನ್ನು ಕೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಸತ್ಯ ಆದಷ್ಟು ಬೇಗ ಹೊರಬರಲಿದೆ’- ಹಾಸನ ಸೆಕ್ಸ್ ಸ್ಕ್ಯಾಂಡಲ್‌ ಬಗ್ಗೆ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

https://newsfirstlive.com/wp-content/uploads/2024/03/Prajwal-Revanna-1.jpg

Load More