4 ದಿನದೊಳಗೆ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಸಾಧ್ಯತೆ
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರೆಲ್ಲ ಆಕಾಂಕ್ಷಿಗಳು ಗೊತ್ತಾ..?
ಬಿಜೆಪಿ ಹೈಕಮಾಂಡ್ ಮಣೆ ಹಾಕೋದು ಯಾರಿಗೆ?
ದಾವಣಗರೆ: ಪಕ್ಷ ಕಟ್ಟುವ ಸಾಮರ್ಥ್ಯ ನನಗೂ ಇದೆ. ನಾನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅನ್ನೋ ಮೂಲಕ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಟವೆಲ್ ಹಾಕಿದ್ದಾರೆ.
ನಗರದಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೇಣುಕಾಚಾರ್ಯ, ನಾನು ರಾಜ್ಯಾದ್ಯಂತ ಓಡಾಡಿ ಪ್ರವಾಸ ಮಾಡಿದ್ದೇನೆ. ನನಗೂ ಪಕ್ಷ ಕಟ್ಟುವ ಸಾಮರ್ಥ್ಯ ಇದೆ. ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.
ಯಾರೆಲ್ಲ ಹೆಸರು ಇದೆ..?
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಕೆಲವೇ ದಿನಗಳಲ್ಲಿ ಹೈಕಮಾಂಡ್ ಕೆಳಗೆ ಇಳಿಸಲಿದೆ. ಕಟೀಲ್ ಅವರಿಂದ ತೆರವಾಗುವ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದೆ. ಈಗಾಲೇ ಮಾಜಿ ಸಚಿವ ವಿ.ಸೋಮಣ್ಣ ಕೂಡ ಬಿಜೆಪಿ ಅಧ್ಯಕ್ಷ ಸ್ಥಾನ ತಮಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಿಗಜಿಣಗಿ, ಬಿವೈ ವಿಜಯೇಂದ್ರ ಹೆಸರುಗಳು ಕೇಳಿಬರುತ್ತಿದೆ.
ಇದೀಗ ರೇಣುಕಾಚಾರ್ಯ ಕೂಡ ತಾವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಂದಿರೋದು ಪ್ರಬಲ ಪೈಪೋಟಿಗೆ ಕಾರಣವಾಗಿದೆ. ವರದಿಗಳ ಪ್ರಕಾರ ಇನ್ನು ನಾಲ್ಕು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಯಾರನ್ನು ನೇಮಕ ಮಾಡುತ್ತದೆ ಅನ್ನೋದು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ