newsfirstkannada.com

ದಿಢೀರ್ DCM ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ರೇಣುಕಾಚಾರ್ಯ..!

Share :

Published June 14, 2023 at 9:59am

    ಕುತೂಹಲ ಮೂಡಿಸಿದ ಎಂ.ಪಿ.ರೇಣುಕಾಚಾರ್ಯ ನಡೆ

    ವಿಧಾನಸಭೆ ಚುನಾವಣೆಯಲ್ಲಿ ರೇಣುಕಾಚಾರ್ಯಗೆ ಸೋಲು

    ಚುನಾವಣೆ ವೇಳೆ ತೀವ್ರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ

ಮಹತ್ವದ ಬೆಳವಣಿಗೆ ಒಂದರಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಭೇಟಿಯಾಗಿದ್ದಾರೆ.

ಸದಾಶಿವನಗರದಲ್ಲಿರುವ ಶಿವಕುಮಾರ್ ನಿವಾಸಕ್ಕೆ ರೇಣುಕಾಚಾರ್ಯ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಇಬ್ಬರು ನಾಯಕರು ಉಭಯ ಕುಶಲೋಪರಿ ನಡೆಸಿ, ರಾಜಕೀಯ ಸಮಾಲೋಚನೆ ನಡೆಸಿದ್ದಾರೆ. ಆದರೆ ಇಬ್ಬರು ನಾಯಕರು ಭೇಟಿಯ ರಹಸ್ಯ ನಿಗೂಢವಾಗಿಯೇ ಇದೆ.

ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಕ್ಷದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದ ಶಿವಕುಮಾರ್​, ಸಿದ್ದರಾಮಯ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಅಭಿನಂದಿಸಲು ರೇಣುಕಾಚಾರ್ಯ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ರೇಣುಕಾಚಾರ್ಯಗೆ ಸೋಲು ಕಂಡಿದ್ದಾರೆ. ಇನ್ನು, ಡಿ.ಕೆ.ಶಿವಕುಮಾರ್ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯರ ಭೇಟಿಗೂ ತೆರಳಿದ್ದಾರೆ ರೇಣುಕಾಚಾರ್ಯ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದಿಢೀರ್ DCM ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ರೇಣುಕಾಚಾರ್ಯ..!

https://newsfirstlive.com/wp-content/uploads/2023/06/RENUKACHARYA14062023.jpg

Load More