ಸರ್ಕಾರಿ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸುನೀಲ್ ಬೋಸ್​.. ಸಂಸದನ ನಡೆ ಬಗ್ಗೆ ಭಾರೀ ಚರ್ಚೆ..!

author-image
Bheemappa
Updated On
ಸರ್ಕಾರಿ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸುನೀಲ್ ಬೋಸ್​.. ಸಂಸದನ ನಡೆ ಬಗ್ಗೆ ಭಾರೀ ಚರ್ಚೆ..!
Advertisment
  • ಹೆಚ್​​.ಸಿ ಮಹದೇವಪ್ಪ ಪುತ್ರನ ನಡೆಯ ಬಗ್ಗೆ ಭಾರೀ ಚರ್ಚೆ
  • ಚಾಮುಂಡೇಶ್ವರಿ ದೇವಾಲಯಕ್ಕೆ ಜೊತೆಯಾಗಿ ಬಂದಿದ್ದರು
  • ಬೆಂಬಲಿಗರ ಮುಂದೆಯೇ ಕುಂಕುಮ ಇಟ್ಟಿರುವ ಸಂಸದ

ಮೈಸೂರು: ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟಿದ್ದಾರೆ.

ಇದನ್ನೂ ಓದಿ:KRS ಡ್ಯಾಂನ ಒಳ ಹರಿವು, ಹೊರ ಹರಿವು ಹೇಗಿದೆ.. ಎಷ್ಟು ಟಿಎಂಸಿ ನೀರು ಸಂಗ್ರಹ ಆಗಿದೆ ಗೊತ್ತಾ?

ಆಷಾಢ ಮಾಸದ 3ನೇ ಶುಕ್ರವಾರ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಹಾಗೂ ಸಂಸದ ಸುನೀಲ್‌ ಬೋಸ್ ಚಾಮುಂಡಿ ಬೆಟ್ಟಕ್ಕೆ ಜೊತೆಯಾಗಿ ಬಂದಿದ್ದರು. ಈ ವೇಳೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸಚಿವ ಹೆಚ್​.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್​ ಕುಂಕುಮ ಇಟ್ಟಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಮನೆಯಲ್ಲೇ ದರ್ಶನ್ ಪರ ಮಾತು.. ಕೆಂಗಣ್ಣಿಗೆ ಗುರಿಯಾದ ಸ್ಯಾಂಡಲ್​ವುಡ್​ ನಟ..!

publive-image

ಸುನೀಲ್‌ ಬೋಸ್ ಹಾಗೂ ಸವಿತಾ ಅವರ ನಡೆ ಸದ್ಯ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾದೆ. ಈ ಸಲದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment