ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ; ಟಾಪ್​ ಫೋಟೋಸ್​ ಇಲ್ಲಿವೆ!

author-image
Veena Gangani
Updated On
ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ; ಟಾಪ್​ ಫೋಟೋಸ್​ ಇಲ್ಲಿವೆ!
Advertisment
  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದನ ಅದ್ಧೂರಿ ಮದುವೆ
  • ಪ್ರಧಾನಿ ಹೊಗಳಿದ ಖ್ಯಾತ ಗಾಯಕಿಯನ್ನು ಮದುವೆಯಾದ ತೇಜಸ್ವಿ ಸೂರ್ಯ
  • ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಮದುವೆಗೆ ಯಾರೆಲ್ಲಾ ಬಂದಿದ್ದರು?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಗಂಡನ ಮನೆಗೆ ಬಂದ 3 ದಿನದಲ್ಲೇ 5 ತಿಂಗಳ‌ ಬಾಣಂತಿ ಕೊಲೆ ಆರೋಪ.. ಹಸುಗೂಸು ಅನಾಥ

publive-image

ಇಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್​ನಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಜೊತೆಗೆ ವೈವಾಹಿಕ ಜೀವನಕ್ಕೆ ತೇಜಸ್ವಿ ಸೂರ್ಯ ಕಾಲಿಟ್ಟಿದ್ದಾರೆ.

publive-image

ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಪ್ರತಾಪ್​ ಸಿಂಹ ಹಾಗೂ ಅವರ ಮಗಳು ಕೂಡ ಆಗಮಿಸಿದ್ದರು.

publive-image

ಅಲ್ಲದೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ಸಂಸದ ಎಸ್. ಮುನಿಸ್ವಾಮಿ ಅವರು ಭಾಗಿಯಾಗಿದ್ದರು.

publive-image

ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಅವಧೂತ ವಿನಯ್ ಗುರೂಜಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ.

publive-image

ಸಂಸದ ತೇಜಸ್ವಿ ಸೂರ್ಯ ಅವರ ಮದುವೆ ಶಾಸ್ತ್ರಗಳು ನಡೆಯುತ್ತಿರುವಾಗ ಗುರು, ಹಿರಿಯರು, ಬಂಧುಗಳು ಸ್ನೇಹಿತರು ನೆರೆದಿದ್ದರು.

publive-image

ಇನ್ನೂ, ಮಾರ್ಚ್ 9ರಂದು ಬೆಂಗಳೂರು ಅರಮನೆ ಆವರಣದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

publive-image

ಈ ಹಿಂದೆ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಫುಲ್​ ಫಿದಾ ಆಗಿದ್ದರು.

ದಕ್ಷಿಣ ಭಾರತದ ಖ್ಯಾತ ಗಾಯಕಿಯಾದ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ ತುಣುಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದರು.

ಸದ್ಯ ತೇಜಸ್ವಿ ಸೂರ್ಯ ಅವರ ಜೊತೆಗೆ ಶಿವಶ್ರೀ ಸ್ಕಂದಪ್ರಸಾದ್ ಮದುವೆಯಾಗಿ ಹೊಸ ಬಾಳು ಶುರು ಮಾಡಲಿದ್ದಾರೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment