/newsfirstlive-kannada/media/post_attachments/wp-content/uploads/2025/03/tejasvi-surya-12.jpg)
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದನ್ನೂ ಓದಿ:ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ; ಟಾಪ್ ಫೋಟೋಸ್ ಇಲ್ಲಿವೆ!
/newsfirstlive-kannada/media/post_attachments/wp-content/uploads/2025/03/tejasvi-surya-9.jpg)
ಮಾರ್ಚ್ 6ರಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಜೊತೆಗೆ ತೇಜಸ್ವಿ ಸೂರ್ಯ ಅವರು ಮದುವೆಯಾಗಿದ್ದರು.
ಸಂಸದ ತೇಜಸ್ವಿ ಸೂರ್ಯ ಅವರ ಮದುವೆ ಶಾಸ್ತ್ರಗಳು ನಡೆಯುತ್ತಿರುವಾಗ ಗುರು, ಹಿರಿಯರು, ಬಂಧುಗಳು ಸ್ನೇಹಿತರು ನೆರೆದಿದ್ದರು.
ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಗೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಆಗಮಿಸಿದ್ದಾರೆ.
ಅಲ್ಲದೇ ಮಾಜಿ ಸಚಿವ ಕುಮಾರ್ ಬಂಗಾರಪ್ಪ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಅವರ ಆರತಕ್ಷತೆಗೆ ಬಂದಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ನಳಿನ್ ಕುಮಾರ್ ಕಟೀಲ್, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಸಂಸದ ಎಸ್. ಮುನಿಸ್ವಾಮಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ.ಸುಧಾಕರ್ ಸೇರಿದಂತೆ ಸಾಕಷ್ಟು ರಾಜಕೀಯ ಗಣ್ಯರು ಆಗಮಿಸಿದ್ದಾರೆ.
ಇನ್ನೂ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅಲ್ಲದೇ ಮಧ್ಯಾಹ್ನದ ಹೊತ್ತಿಗೆ ಸಿಎಂ ಸಿದ್ದರಾಮಯ್ಯ ಅವರು ಕೂಡ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಆರತಕ್ಷತೆಗೆ ಬರಲಿದ್ದಾರೆ.
ಈ ಹಿಂದೆ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಫುಲ್ ಫಿದಾ ಆಗಿದ್ದರು.
ದಕ್ಷಿಣ ಭಾರತದ ಖ್ಯಾತ ಗಾಯಕಿಯಾದ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ ತುಣುಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು.
ಸದ್ಯ ತೇಜಸ್ವಿ ಸೂರ್ಯ ಅವರ ಜೊತೆಗೆ ಶಿವಶ್ರೀ ಸ್ಕಂದಪ್ರಸಾದ್ ಮದುವೆಯಾಗಿ ಹೊಸ ಬಾಳು ಶುರು ಮಾಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ