/newsfirstlive-kannada/media/post_attachments/wp-content/uploads/2025/01/TEJASWI_SURYA.jpg)
ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಭಾವಿಪತ್ನಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ಸೇರಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಹೊರ ಹೊಲಯದಲ್ಲಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭಾವಿ ಪತ್ನಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದರು. ಈ ವೇಳೆ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಗುರೂಜಿ ಅವರು ಇಬ್ಬರಿಗೂ ಶುಭ ಹಾರೈಸಿದ್ದಾರೆ.
ಬಿಜೆಪಿಯ ಯುವ ಸಂಸದರಾದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ, ನಟಿ ಸಿವಶ್ರೀ ಸ್ಕಂದ ಪ್ರಸಾದ್ ಅವರ ಜೊತೆ ವಿವಾಹವಾಗಲಿದ್ದಾರೆ ಎಂದು ಇತ್ತೀಚೆಗಷ್ಟೇ ಹೇಳಲಾಗಿತ್ತು. ಇದರ ಬೆನ್ನಲ್ಲೇ ಇಬ್ಬರು ನಗರದ ಹೊರ ಹೊಲಯದಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವುದು ವಿಶೇಷ ಎನಿಸಿತು.
ಸಿವಶ್ರೀ ಸ್ಕಂದ ಪ್ರಸಾದ್ ಅವರು ಗಾಯಕಿ ಆಗಿದ್ದು ಹಾಡುಗಳನ್ನು ಉತ್ತಮವಾಗಿ ಹಾಡುತ್ತಾರೆ. ಇದರ ಜೊತೆಗೆ ಹರಿಕಥೆ, ಭಜನೆ, ಸೈಕ್ಲಿಂಗ್, ವಾಕ್ಥಾನ್ ಮೂಲಕ ಕಾರ್ಯಕ್ರಮದಲ್ಲಿ ನರೆದ ಎಲ್ಲರ ಗಮನ ಸೆಳೆಯಬಲ್ಲರು. ಇದರ ಜೊತೆ ಈ ಯುವ ಜೋಡಿಯ ವಿವಾಹ ಸಮಾರಂಭವು 2025ರ ಮಾರ್ಚ್ 4 ರಂದು ನಿಶ್ಚಯವಾಗಿದೆ.
ಇದನ್ನೂ ಓದಿ:BBK11; ದೇವರಾಣೆಗೂ ಟ್ರೋಫಿ ಗೆಲ್ಲೋಕೆ ಬಂದಿಲ್ಲ, ಮಜಾ ಮಾಡಿ ಬರೋಣ ಅಂತಾ ಬಂದಿದ್ದೆ- ಹನುಮಂತು
ಇನ್ನು ತೇಜಸ್ವಿ ಸೂರ್ಯ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆಲುವು ಪಡೆದಿದ್ದರು. 2024ರಲ್ಲೂ ಇದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 2ನೇ ಬಾರಿಯು 34 ವರ್ಷದ ತೇಜಸ್ವಿ ಸೂರ್ಯ ಗೆಲುವು ಸಾಧಿಸಿ ಪ್ರಸ್ತುತ ಸಂಸದರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ