7 ಜನರು ಬಲಿ.. ಗುಡ್ಡ ಕುಸಿತದ ಭೀಕರತೆ ಬಗ್ಗೆ ತಿಳಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

author-image
AS Harshith
Updated On
7 ಜನರು ಬಲಿ.. ಗುಡ್ಡ ಕುಸಿತದ ಭೀಕರತೆ ಬಗ್ಗೆ ತಿಳಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
Advertisment
  • ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತ
  • ಅಲ್ಲಿನ ಭೀಕರತೆಯ ಬಗ್ಗೆ ತಿಳಿಸಿದ ಸಂಸದ ಕಾಗೇರಿ
  • ಜಿಲ್ಲಾಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಪಡೆದ ಕಾಗೇರಿ

ಕಾರಾವಾರ: ಶಿರೂರು ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಪಡೆದ ಬಳಿಕ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದ ಭೀಕರತೆಯ ಬಗ್ಗೆ ಸಂಸದರು ತಿಳಿಸಿದ್ದಾರೆ.

ಏನಿದು ಘಟನೆ?

ಉತ್ತರ ಕನ್ನಡ ಜಿಲ್ಲೆಯಲ್ಲಿ ರಣ ಭೀಕರ ಮಳೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಭಾರೀ ಗುಡ್ಡಕುಸಿತ ಸಂಭವಿಸಿದೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅದರಲ್ಲಿ ಒಂದೇ ಕುಟುಂಬದವರೂ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

publive-image

ಇದನ್ನೂ ಓದಿ: KSRTC ಬಸ್​ ಗುದ್ದಿದ ರಭಸಕ್ಕೆ ಸಂಪೂರ್ಣ ಜಖಂಗೊಂಡ ಕಾರು.. ಕಾರಿನಲ್ಲಿದ್ದವರ ಪರಿಸ್ಥಿತಿ?

ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು, ಐಆರ್​ಬಿ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment