/newsfirstlive-kannada/media/post_attachments/wp-content/uploads/2024/04/MS-DHONI-7.jpg)
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅದ್ಭುತ ಬ್ಯಾಟಿಂಗ್ ಮಾಡಿದರು. ಮೂರು ಸಿಕ್ಸರ್, 4 ಬೌಂಡರಿ ಚಚ್ಚಿ ಅಭಿಮಾನಿಗಳನ್ನು ರಂಜಿಸಿದರು. ಒಟ್ಟು 16 ಬಾಲ್ಗಳನ್ನು ಎದುರಿಸಿದ ತಲಾ, 37 ರನ್ಗಳನ್ನು ಸಿಡಿಸಿ ಮಿಂಚಿದರು.
ಮೂರು ಪಂದ್ಯಗಳನ್ನು ಆಡಿದ್ದ ಧೋನಿಗೆ, ಕಳೆದ ಎರಡು ಪಂದ್ಯಗಳಲ್ಲಿ ಧೋನಿಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ನಿನ್ನೆಯ ಪಂದ್ಯಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಅಭಿಮಾನಿಗಳ ಆಸೆಗೆ ಧೋನಿ ನಿರಾಸೆ ಮಾಡಲಿಲ್ಲ. ಅಂತೆಯೇ ಈ ಬಾರಿಯ ಐಪಿಎಲ್ನಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್ ಮಾಡಿದರು.
ಇದನ್ನೂ ಓದಿ: ನಿರಾಸೆ ಮಾಡಲಿಲ್ಲ ಧೋನಿ; ಒಂದೇ ಕೈಯಲ್ಲಿ ಅದ್ಭುತ ಸಿಕ್ಸರ್ ಸಿಡಿಸಿದ ವಿಡಿಯೋ
ಈ ಫೋಟೋವನ್ನು ನೋಡಿದ ಅಭಿಮಾನಿಗಳು ಅಚ್ಚರಿಗೆ ಒಳಗಾಗಿದ್ದಾರೆ. ಮಾತ್ರವಲ್ಲ, ಬೇಸರ ವ್ಯಕ್ತಪಡಿಸ್ತಿದ್ದಾರೆ. ಅಭಿಮಾನಿಗಳಿಗಾಗಿ ಧೋನಿ ಬ್ಯಾಟ್ ಬೀಸಿದರು ಎಂದು ಕೊಂಡಾಡುತ್ತಿದ್ದಾರೆ. ಮಾತ್ರವಲ್ಲ, ಅವರ ಕಾಲನ್ನು ನೋಡಿ ಬೇಸರ ವ್ಯಕ್ತಪಡಿಸ್ತಿದ್ದಾರೆ.
He is really playing for the fans 🥹💛#Dhoni#CSKVDCpic.twitter.com/J7sFzYj36m
— Amit 𝕏 (@AMITZZZ_) March 31, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ