ಮುಡಾ ಕೇಸ್; ಮೊದಲ ಬಾರಿ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮುಯ್ಯ

author-image
Bheemappa
Updated On
ಮುಡಾ ಕೇಸ್; ಮೊದಲ ಬಾರಿ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮುಯ್ಯ
Advertisment
  • ಲೋಕಾಯುಕ್ತ ಅಧಿಕಾರಿಯಿಂದ ಸಿದ್ದರಾಮಯ್ಯಗೆ ಪ್ರಶ್ನೆ
  • ತಮ್ಮದೇ ಕಾರಿನಲ್ಲಿ ಕಚೇರಿಗೆ ಆಗಮಿಸಿದ ಸಿದ್ದರಾಮಯ್ಯ
  • ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದಾರೆ

ಮೈಸೂರು: ಮುಡಾ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಸಿಎಂ ಸಿದ್ದರಾಮುಯ್ಯ ಅವರು ಇದೇ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಮೈಸೂರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಅವರು ಕಾರು ಮೂಲಕ ಆಗಮಿಸಿದ್ದಾರೆ. ಬಳಿಕ ಮುಡಾ ಕೇಸ್​​ಗೆ ಸಂಬಂಧ ಪಟ್ಟಂತೆ ಲೋಕಾಯುಕ್ತ ಎಸ್​​ಪಿ ಉದೇಶ್ ಮುಂದೆ ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎ1 ಆರೋಪಿಯಾಗಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ:‘ಈಗ’ ಮೂವಿ ಮಾದರಿಯಲ್ಲೇ ರಹಸ್ಯ ಭೇದಿಸಿದ ನೊಣ.. ಸ್ವಂತ ಚಿಕ್ಕಪ್ಪನನ್ನೇ ಮುಗಿಸಿದ್ದ ಕಿರಾತಕ

publive-image

ಇನ್ನು ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ತಮ್ಮದೇ ಖಾಸಗಿ ಕಾರ(ಕೆಎ 04 ಎಂವಿ 7666)ಲ್ಲಿ ಆಗಮಿಸಿದ್ದಾರೆ. ವಿಚಾರಣೆಗೆ ಬರುವಾಗ ಸರ್ಕಾರಿ ವಾಹನ ಬಳಸುವಂತಿಲ್ಲ. ಹೀಗಾಗಿ ತಮ್ಮದೇ ಕಾರಿನಲ್ಲಿ ಬಂದಿದ್ದಾರೆ. ಇದೇ ವೇಳೆ ನಗರ ಪೊಲೀಸರು, ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಅಗತ್ಯ ಸೂಚನೆಗಳನ್ನು ಪೊಲೀಸ್‌ ಸಿಬ್ಬಂದಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿ ಸಂಪರ್ಕಿಸುವ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸೈಟ್​​ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೊದಲೇ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಈ ಸಂಬಂಧ ಸಿದ್ದರಾಮಯ್ಯ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment