ಮುಡಾ ಕೇಸ್‌ನಲ್ಲಿ ED ಶಾಕ್‌; ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ತಾತ್ಕಾಲಿಕ ರಿಲೀಫ್‌!

author-image
admin
Updated On
ಮುಡಾ ಕೇಸ್‌ನಲ್ಲಿ ED ಶಾಕ್‌; ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ತಾತ್ಕಾಲಿಕ ರಿಲೀಫ್‌!
Advertisment
  • ಸಿಎಂ ಪತ್ನಿಗೆ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ ಆರೋಪ
  • ಸಚಿವ ಬೈರತಿ ಸುರೇಶ್ ಇಬ್ಬರಿಗೂ ಸಮನ್ಸ್‌ ಜಾರಿ ಮಾಡಿದ್ದ ಇ.ಡಿ
  • ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಬಿಟ್ಟು ಬಿಡದೇ ಕಾಡುತ್ತಿರುವ ಮುಡಾ ಹಗರಣಕ್ಕೆ ಮತ್ತೊಂದು ಮೆಗಾ ತಿರುವು ಸಿಕ್ಕಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ 10 ದಿನಗಳ ಕಾಲ ಸಿಎಂ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಇಬ್ಬರಿಗೂ ತಾತ್ಕಾಲಿಕ ರಿಲೀಫ್ ನೀಡಿದೆ.

ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ ಆರೋಪದಲ್ಲಿ ಇ.ಡಿ (ಜಾರಿ ನಿರ್ದೇಶನಾಲಯ) ಸಚಿವ ಬೈರತಿ ಸುರೇಶ್ ಸೇರಿ ಇಬ್ಬರಿಗೂ ಸಮನ್ಸ್‌ ಜಾರಿ ಮಾಡಿದೆ. ಇ.ಡಿ ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಫೆಬ್ರವರಿ 20ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದೆ.

publive-image

ತಡೆಯಾಜ್ಞೆ ಕೂಡ 10 ದಿನ ವಿಸ್ತರಣೆ!
ಇ.ಡಿ ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಇದೇ ವೇಳೆ ಇಬ್ಬರಿಗೂ ನೀಡಿದ್ದ ಸಮನ್ಸ್‌ಗೆ ಕೂಡ ಫೆಬ್ರವರಿ 20ರವರೆಗೆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ: ಪ್ರಯಾಗ್‌ ರಾಜ್‌ ಮಹಾಕುಂಭಮೇಳದಲ್ಲಿ ಡಿ.ಕೆ ಶಿವಕುಮಾರ್ ಪುಣ್ಯಸ್ನಾನ; ಟಾಪ್ 10 ಪೋಟೋಗಳು! 

ಹೈಕೋರ್ಟ್ ಈ ಆದೇಶದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಅವರು ಫೆಬ್ರವರಿ 20ರವರೆಗೂ ಇ.ಡಿ ವಿಚಾರಣೆಗೆ ಹಾಜರಾಗುವ ಅಗತ್ಯ ಇಲ್ಲ. ಆದರೆ ಇ.ಡಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರಗಳ ಕಾಲಾವಕಾಶ‌ವನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್‌ನಲ್ಲಿ ಇ.ಡಿ ಪರ ವಕೀಲ ಅರವಿಂದ್ ಕಾಮತ್ ಹಾಗೂ ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment