/newsfirstlive-kannada/media/post_attachments/wp-content/uploads/2025/07/Mumbai-train-2006.jpg)
ಮುಂಬೈ ಟ್ರೈನ್ ಬಾಂಬ್ ಬ್ಲಾಸ್ಟ್-2006 (Mumbai train bomb blasts) ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಸುಪ್ರೀಂ ಕೊರ್ಟ್ (Supreme Court ) ಮಹತ್ವದ ತೀರ್ಪು ನೀಡಿದೆ. ಪ್ರಕರಣದ 12 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ (Bombay High Court) ನೀಡಿದ್ದ ಖುಲಾಸೆಗೆ ತಡೆಯಾಜ್ಞೆ ನೀಡಿದೆ.
ಬಾಂಬೆ ಹೈಕೋರ್ಟ್ ಇದೇ ಸೋಮವಾರ 12 ಅಪರಾಧಿಗಳನ್ನು ಪ್ರಕರಣದಿಂದ ಖುಲಾಸೆ ಮಾಡಿತ್ತು. ಹೈಕೋರ್ಟ್ನ ನಿರ್ಧಾರ ಪ್ರಶ್ನೆ ಮಾಡಿದ ಮಹಾರಾಷ್ಟ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ವಿಸ್ತೃತ ಅರ್ಜಿ ವಿಚಾರಣೆ ನಡೆಯಬೇಕಿದೆ. ಅಲ್ಲಿಯವರೆಗೆ ಹೈಕೋರ್ಟ್ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇದನ್ನೂ ಓದಿ: ಗರ್ಭಿಣಿ ಪತ್ನಿ ಮೃತದೇಹದ ಮುಂದೆ ಎಗ್ ಬುರ್ಜಿ ಮಾಡಿ ತಿಂದ ಪತಿ.. ಬೆಂಗಳೂರಲ್ಲಿ ಮತ್ತೊಂದು ಹಾರರ್..!
ಪ್ರಕರಣದ ಎಲ್ಲಾ ಆರೋಪಿಗಳಿಗೂ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್, ಅವರ ಬಿಡುಗಡೆಗೆ ಯಾವುದೇ ತಡೆ ನೀಡಿಲ್ಲ. ಜುಲೈ 11, 2006ರಲ್ಲಿ ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಮುಂಬೈ ಲೋಕಲ್ ಟ್ರೈನ್ನ 7 ಕೋಚ್ಗಳನ್ನ ಸ್ಫೋಟ ಮಾಡಲಾಗಿತ್ತು. ಈ ಕೃತ್ಯದಲ್ಲಿ 189 ಮಂದಿ ಪ್ರಾಣ ಕಳೆದುಕೊಂಡಿದ್ದರು. 824 ಜನರು ಗಂಭೀರವಾಗಿ ಗಾಯಗೊಂಡಿದ್ದರು.
2015ರಲ್ಲಿ MCOCA ವಿಶೇಷ ಕೋರ್ಟ್ 13 ಮಂದಿ ಅಪರಾಧಿಗಳು ಎಂದು ತೀರ್ಪು ನೀಡಿತ್ತು. ಅಲ್ಲದೇ ಅವರಲ್ಲಿ ಐವರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿತು. ಉಳಿದ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿತ್ತು. ಓರ್ವನನ್ನು ಪ್ರಕರಣದಿಂದ ಖುಲಾಸೆ ಮಾಡಿತ್ತು. ಮರಣದಂಡನೆಗೆ ಒಳಗಾದ ಓರ್ವ ಅಪರಾಧಿ 2021ರಲ್ಲಿ ಕೊರೊನಾದಿಂದ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಮ್ಯಾಂಚೆಸ್ಟರ್ ಟೆಸ್ಟ್ನ ಮೊದಲ ದಿನವೇ ಆಘಾತ.. ರಿಷಬ್ ಪಂತ್ಗೆ ಅಸಲಿಗೆ ಆಗಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ