/newsfirstlive-kannada/media/post_attachments/wp-content/uploads/2024/06/MUMBAI_IAS.jpg)
ಮುಂಬೈ: ಮಹಾರಾಷ್ಟ್ರದ ಮಹಿಳಾ ಐಎಎಸ್​ ಅಧಿಕಾರಿಯೊಬ್ಬರ ಪುತ್ರಿ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನ ಕಫ್ ಪರೇಡ್‌ನಲ್ಲಿನ ಸುನೀತಿ ಬಿಲ್ಡಿಂಗ್​​ನಲ್ಲಿ ನಡೆದಿದೆ. ಯುವತಿ ಬರೆದಿರುವ ಡೆತ್​ನೋಟ್​ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹರಿಯಾಣದ ಸೋನಿಪತ್​ನಲ್ಲಿ ಎಲ್​​ಎಲ್​​ಬಿ ವ್ಯಾಸಂಗ ಮಾಡುತ್ತಿದ್ದ ಲಿಪಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ಶೈಕ್ಷಣಿಕ ವರ್ಷದಲ್ಲಿ ಸರಿಯಾಗಿ ವಿದ್ಯಾಭ್ಯಾಸ ಮಾಡಿಲ್ಲ ಎಂದು ಮನನೊಂದು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡೆತ್​​ನೋಟ್ ಬರೆದಿಟ್ಟಿರುವ ಯುವತಿ ನನ್ನ ಸಾವಿಗೆ ಯಾರು ಕಾರಣರಲ್ಲ. ಹೀಗಾಗಿ ಯಾರನ್ನು ದೂಷಿಸಬೇಡಿ ಎಂದು ಬರೆದುಕೊಂಡಿದ್ದಾಳೆ. ಲಿಪಿ ಕಂಟೆಂಟ್ ರೈಟರ್ ಮತ್ತು ಸೌಂದರ್ಯ ಸಲಹೆಗಾರರಾಗಿ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:4 ತಿಂಗಳಲ್ಲಿ 15 ಕೆಜಿ ತೂಕ.. ಸೂರ್ಯನ ಫಿಟ್ನೆಸ್​ ಬೇರೆಯದ್ದೇ ಕತೆ ಹೇಳ್ತಿದೆ..!
/newsfirstlive-kannada/media/post_attachments/wp-content/uploads/2024/06/MUMBAI_IAS_DOUGHTER_1.jpg)
ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿ ವಿಕಾಸ್ ರಸ್ತೋಗಿ ಹಾಗೂ ಐಎಎಸ್​ ಆಫೀಸರ್​ ರಾಧಿಕಾ ರಸ್ತೋಗಿ ದಂಪತಿಯ ಮಗಳು ಲಿಪಿ ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಕಾನೂನು ವಿದ್ಯಾರ್ಥಿಯಾಗಿರುವ ಲಿಪಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿ ಇರುವ ಕಟ್ಟಡದ 10ನೇ ಮಹಡಿಯಿಂದ ಜಿಗಿದಿದ್ದಾಳೆ. ತಕ್ಷಣ ಸ್ಥಳದಲ್ಲಿ ಇದ್ದವರು ಇದನ್ನು ಗಮನಿಸಿ ಕೂಡಲೇ ಯುವತಿಯನ್ನು ಜಿಟಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇನ್ನು ಡೆತ್​​ನೋಟ್​ನಲ್ಲಿ ಯಾರ ಹೆಸರನ್ನು ಉಲ್ಲೇಖ ಮಾಡದ ಕಾರಣ ಕಫೆ ಪರೇಡ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us