/newsfirstlive-kannada/media/post_attachments/wp-content/uploads/2025/05/murali1.jpg)
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ:ಪಾಕ್ ದಾಳಿಗೆ ಗೋರಂಟ್ಲು ಯೋಧ ಹುತಾತ್ಮ; ಮಧ್ಯಾಹ್ನ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ
/newsfirstlive-kannada/media/post_attachments/wp-content/uploads/2025/05/murali2.jpg)
ಶ್ರೀಸತ್ಯಸಾಯಿ ಜಿಲ್ಲೆಯ ಮುರಳಿ ನಾಯಕ್ ಪಾಕಿಸ್ತಾನ ಸೇನೆಯ ಅನಿಯಂತ್ರಿತ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರ ಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯಕ್ ವೀರ ಮರಣ ಹೊಂದಿದ್ದಾರೆ.
/newsfirstlive-kannada/media/post_attachments/wp-content/uploads/2025/05/murali3.jpg)
ಇಂಡಿಗೋ ವಿಮಾನದ ಮೂಲಕ ದೆಹಲಿಯಿಂದ ಕೆಐಎಬಿಗೆ ಯೋಧನ ಪಾರ್ಥಿವ ಶರೀರ ಆಗಮನವಾಗಿದೆ. ಏರ್​ಪೋರ್ಟ್​​ನ ಕಾರ್ಗೋ ಟರ್ಮಿನಲ್​ನಲ್ಲಿ ಯೋಧರು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತಿಮ ನಮನ ಸಲ್ಲಿಸಿದ ಬಳಿಕ ರಸ್ತೆ ಮೂಲಕ ಸೇನಾ ವಾಹನದಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ಸದ್ಯಕ್ಕೆ ಮುರಳಿ ನಾಯಕ್ ಹುಟ್ಟೂರು ಕಲ್ಲಿತಾಂಡಾ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us