/newsfirstlive-kannada/media/post_attachments/wp-content/uploads/2024/06/Renukaswamy.jpg)
ಚಿತ್ರದುರ್ಗ ಮೂಲದ ರೇಣುಕಾಸ್ಚಾಮಿಯನ್ನ ಮೈಸೂರಿಗೆ ಕರೆತಂದು ಹಲ್ಲೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ದರ್ಶನ್ ಬೌನ್ಸರ್ಸ್ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಮೈಸೂರಿನಿಂದ ಬೆಂಗಳೂರಿಗೆ ಬಂದು ಬಿಸಾಡಿದ್ದರು ಎನ್ನಲಾಗುತ್ತಿದೆ.
ಆಧಾರ್​ ಕಾರ್ಡ್​ ಕೊಟ್ಟ ಸುಳಿವು
ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆ ಮಾಡಲಾಗಿತ್ತು. ಮೃತನ ಜೇಬಲ್ಲಿ ಸಿಕ್ಕ ಆಧಾರ್ ಕಾರ್ಡ್ ನಿಂದ ಕೇಸ್ ಟ್ರೇಸ್ ಮಾಡಿದ್ದಾರೆ. ಯುವಕನ ಫೋನ್​ ನಂಬರ್​ ಮೇಲೆ ತನಿಖೆ ಕೈಗೊಂಡಿದ್ದಾರೆ. ಈ ವೇಳೆ ನಟ ದರ್ಶನ್ ಹೆಸರು ತಲುಕುಹಾಕಿದೆ. ​IPC 1860 (U/s-302,201) ಅಡಿಯಲ್ಲಿ ಕೇಸ್ ದಾಖಲಿಸಿದ್ದ ಪೊಲೀಸರು ದರ್ಶನ್​ ಅವರನ್ನು ಅರೆಸ್ಟ್​ ಮಾಡಿದ್ದು, ಸದ್ಯ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದರ್ಶನ್​ ಏಟಿಗೆ ಕೊಲೆಯಾದ ರೇಣುಕಾಸ್ವಾಮಿ ಯಾರು? ಇಲ್ಲಿದೆ ಇಂಚಿಂಚು ಮಾಹಿತಿ
ಕ್ರೂರವಾಗಿ ಕೊಲೆ ಮಾಡಿದ ಹಂತಕರು
ರೇಣುಕಾಸ್ವಾಮಿಯನ್ನು ಅಮಾನವೀಯವಾಗಿ ಹೊಡೆದು ಕೊಲ್ಲಲಾಗಿದೆ. ಮುಖದ ಮೂಳೆ ಮುರಿಯಲಾಗಿದೆ. ಮೂಗು ಓಪನ್ ಆಗುವಂತೆ ಗುದ್ದಿದ್ದಾರೆ. ಎದೆಯ ಎಡ ರಿಬ್ ಕಟ್ ಆಗುವಂತೆ ಹಲ್ಲೆ ಮಾಡಿದ್ದಾರೆ. ಕಾಲು ಮತ್ತು ಕೈಗೆ ಬ್ಯಾಟ್ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ, ಕಾಲಿನಿಂದ ಮರ್ಮಾಂಗಕ್ಕೆ ತುಳಿದಿದ್ದಾರೆ. ರಾಕ್ಷಸರಂತೆ ರೇಣುಕಾಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ಪರಿಣಾಮ ಯುವಕ ನರಳಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ರೇಣುಕಾಸ್ವಾಮಿ ಬಾಡಿ ಸಿಕ್ಕಿದ್ದೆಲ್ಲಿ?
ಸತ್ವ ಅನುಗ್ರಹ ಅಪಾರ್ಟ್ ಮೆಂಟ್ ನ ಮುಂಭಾಗದಲ್ಲಿರುವ ಮೋರಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು.
ಕೊಲೆ ಮಾಡಲು ಕಾರಣ?
ನಟಿ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ ಆರೋಪದ ಮೇಲೆಗೆ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿಕೊಳ್ಳಲಾಗಿತ್ತು. ಬಳಿಕ ಆತನನ್ನು ಚಿತ್ರಹಿಂಸೆ ನೀಡಿ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us