newsfirstkannada.com

ಖಾದರ್.. ನರಕಕ್ಕೆ ಹೋಗಲಿ; ದೈವಗಳ ಹರಕೆ ಕೋಲ ನೆರವೇರಿಸಿದಕ್ಕೆ ಮುಸ್ಲಿಂ ಧಾರ್ಮಿಕ ಮುಖಂಡನಿಂದ ಆಕ್ಷೇಪ

Share :

Published February 5, 2024 at 2:10pm

Update February 5, 2024 at 2:15pm

    ದೈವಗಳ ಹರಕೆಕೋಲ ನೆರವೇರಿಸಿದ ವಿಧಾನಸಭಾ ಅಧ್ಯಕ್ಷ

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಸಾಲೆತ್ತೂರು ಫೈಝಿ

    ಖಾದರ್​​ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು

ದೈವಗಳ ಹರಕೆಕೋಲ ನೆರವೇರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್​​ಗೆ ಮುಸ್ಲಿಂ ಧಾರ್ಮಿಕ ಮುಖಂಡನೋರ್ವ ವಿರೋಧ ವ್ಯಕ್ತ ಪಡಿಸಿದ್ದಾರೆ. ಸಾಲೆತ್ತೂರು ಫೈಝಿ ಎಂಬ ವ್ಯಕ್ತಿ ವಿರೋಧಿಸಿದ್ದಾರೆ.

ಸಾಲೆತ್ತೂರು ಫೈಝಿ ದೈವಗಳ ಹರಕೆಕೋಲ ನೆರವೇರಿಸಿದ ಯು.ಟಿ ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಅದರಲ್ಲಿ  ‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ’ ಎಂದು ಬರೆದುಕೊಂಡಿದ್ದಾರೆ.

ನಂತರ ‘ಖಾದರ್ ಕೊರಗಜ್ಜನಿಗೂ, ಕಲ್ಲುರ್ಟಿ,ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವತಂತ್ರ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಾಕಿದ್ದಾರೆ.

ಏನಿದು ಘಟನೆ?

ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್  ಶ್ರೀ ಕ್ಷೇತ್ರ ಪಣೋಲಿ ಬೈಲ್​ಗೆ ಭೇಟಿ ನೀಡಿ ಹರಕೆ ಕೋಲ ನೆರವೇರಿಸಿದ್ದರು. ಬಳಿಕ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು. ಆದರೆ ಯು ಟಿ ಖಾದರ್​ ಮುಸ್ಲಿಂ ಪಂಗಡಕ್ಕೆ ಸೇರಿದವರಾಗಿದ್ದು, ಅವರ ನಡತೆಯನ್ನು ವಿರೋಧಿಸಿ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಹಾಕುವ ಮೂಲಕ ವಿರೋಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಖಾದರ್.. ನರಕಕ್ಕೆ ಹೋಗಲಿ; ದೈವಗಳ ಹರಕೆ ಕೋಲ ನೆರವೇರಿಸಿದಕ್ಕೆ ಮುಸ್ಲಿಂ ಧಾರ್ಮಿಕ ಮುಖಂಡನಿಂದ ಆಕ್ಷೇಪ

https://newsfirstlive.com/wp-content/uploads/2024/02/UT-Khader.jpg

Load More